ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ಸೋಂಕು ಹೆಚ್ಚಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಹೆಚ್ಚಾಗಿ ಜನ ಸಂದಣಿ ಸೇರುವುದು ಉಚಿತವಾಗಿರುವುದಿಲ್ಲ. ಆದ್ದರಿಂದ ಅಕ್ಟೋಬರ್ 17 ರಂದು ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಹಾಗೂ ಅಕ್ಟೋಬರ್ 26 ರಂದು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆಯನ್ನು ಸರಳವಾಗಿ ಆಚರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಆದೇಶವನ್ನು ಹೊರಡಿಸುವುದು ಸೂಕ್ತವೆಂದು ಕಂಡುಬಂದ ಕಾರಣ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯುಲೇಶನ್ 2020 ರ ನಿಯಮ 12, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್-2005 ಕಲಂ.24(ಎ), (ಬಿ), 30(2), 33 ರಡಿ ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ.144, ಕರ್ನಾಟಕ ಮೋಟಾರು ವಾಹನಗಳ ನಿಯಮ 1988 ರ ಕಲಂ.115, ಕರ್ನಾಟಕ ಮೋಟಾರು ವಾಹನಗಳ ನಿಯಮ 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31 ರಡಿಯಲ್ಲಿ ದತ್ತವಾದ ಅಧಿಕಾರದಂತೆ ಸರ್ಕಾರದ ಆದೇಶ/ ಮಾರ್ಗಸೂಚಿ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಅಕ್ಟೋಬರ್, 17 ಮತ್ತು ಅಕ್ಟೋಬರ್ 26 ರಂದು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶದ ಉಲ್ಲಂಘನೆಯು ಐ.ಪಿ.ಸಿ ಸೆಕ್ಷನ್ 188 ರಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.