ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 121 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
76 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 45 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 16 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 49 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 34 ಆರ್.ಟಿ.ಪಿ.ಸಿ.ಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 43 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 29 ಆರ್.ಟಿ.ಪಿ.ಸಿ.ಆರ್ ಮತ್ತು 14 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣ ಆರ್ಟಿಪಿಸಿಆರ್ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4095 ಆಗಿದ್ದು, 3319 ಮಂದಿ ಗುಣಮುಖರಾಗಿದ್ದಾರೆ. 717 ಸಕ್ರಿಯ ಪ್ರಕರಣಗಳಿದ್ದು, 59 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 598 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.