ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಇದರ ಆಡಳಿತ ಮಂಡಳಿಗೆ ಅಕ್ಟೋಬರ್, 09 ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯು ಬುಧವಾರ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಸಭೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಅಪ್ಪಚಟ್ಟೋಳಂಡ ಮನು ಮುತ್ತಪ್ಪ ಅವರ ಏಕ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಒಟ್ಟು 4 ನಾಮಪತ್ರ ಸಲ್ಲಿಕೆಯಾಗಿ ಅಂತಿಮವಾಗಿ ಪಟ್ಟಡ ಸಿ.ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾದಿಕಾರಿ ಮೋಹನ್ ಪ್ರಕಟಿಸಿದ್ದಾರೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಯೋಗೇಂದ್ರ ನಾಯಕ್ ಅವರು ತಿಳಿಸಿದ್ದಾರೆ.