ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಮೋಟೇರಿ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ಗ್ರಾಮಸ್ಥರು ಸಚಿವರನ್ನು ಅಭಿನಂದಿಸಿ ದೇವಸ್ಥಾನದ ಜಿರ್ಣೋದ್ಧಾರ ಮತ್ತು ಗ್ರಾಮದ ಅಭಿವೃದ್ಧಿ ಕುರಿತು ಸಚಿವರಲ್ಲಿ ಮನವಿ ಮಾಡಿದರು.
ವಿರಾಜಪೇಟೆ ಶಾಸಕರಾದ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಜಿ.ಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಲಕಾವೇರಿ ಭಾಗಮಂಡಲ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ತಮ್ಮಯ್ಯ ಇತರರು ಇದ್ದರು.