ಮಡಿಕೇರಿ: ಕೊಡಗು ಜಿಲ್ಲಾ ಹಾಪ್ ಕಾಮ್ಸ್ನ ನೂತನ ಅಧ್ಯಕ್ಷರಾಗಿ ಬಿದ್ದಾಟಂಡ ರಮೇಶ್ ಚಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮಲ್ಲಂಡ ಮಧು ದೇವಯ್ಯ ಅವರು ಗುರುವಾರ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಎಸ್.ಪಿ.ಪೊನ್ನಪ್ಪ, ಪಾಡಿಯಮ್ಮನ.ವಿ.ಮಹೇಶ್, ಲಿಲಾ ಮೇದಪ್ಪ, ಸತೀಶ್, ಮಾಚಿಮಂಡ ಡಿ.ಗಣಪತಿ, ಹೆಚ್,ಎಂ.ಸುಧೀರ್, ಬೇಬಿ ಪೂವಯ್ಯ, ಬಿ.ಎ.ಹರೀಶ್, ನಾಗೇಶ್ ಕುಂದಲಪಾಡಿ, ಉಮೇಶ್ ರಾವ್ ಅರಸ್, ಪೂವಪ್ಪ ನಾಯಕ, ಕೆ.ಎಂ.ಮನೋಹರ್ ಅವರು ಆಯ್ಕೆಯಾಗಿದ್ದಾರೆ.
ನಗರದ ತೋಟಗಾರಿಕೆ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಹಾಪ್ಕಾಮ್ಸ್ ಮಡಿಕೇರಿಯ ಪದಾಧಿಕಾರಿಗಳು ಹಾಗೂ ಜಿ.ಪಂ.ಅಧ್ಯಕ್ಷರಾದ ಬಿ.ಹರೀಶ್ ಅವರು ಸನ್ಮಾನಿಸಿದರು.
ಬಿದ್ದಾಟಂಡ ರಮೇಶ್ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಹಾಗೂ ರೈತರು ಬೆಳೆದ ಉತ್ಪನ್ನಗಳನ್ನು ನೇರವಾಗಿ ಖರೀದಿಸಿ ಅವರಿಗೆ ಸೂಕ್ತ ಬೆಲೆಯನ್ನು ಒದಗಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಮಲ್ಲಂಡ ಮಧು ದೇವಯ್ಯ ಅವರು ಮಾತನಾಡಿ ಜಿಲ್ಲಾ ಹಾಪ್ ಕಾಮ್ಸ್ ಹುದ್ದೆ ದೊಡ್ಡ ಜವಾಬ್ದಾರಿಯಾಗಿದ್ದು, ಜನರ ಏಳಿಗೆಗಾಗಿ ಶ್ರಮಿಸುತ್ತೇನೆ ಮತ್ತು ಕೊಡಗು ಜಿಲ್ಲಾ ಹಾಪ್ ಕಾಮ್ಸ್ ನ್ನು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೆ ಕೊಂಡ್ಯೊಯುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ್, ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಇತರರು ಇದ್ದರು.