Header Ads Widget

Responsive Advertisement

ಕೊಡಗು: ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ


ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ಕೆ 45 ದಿನಗಳ ಕಾಲ ನಡೆಯುವ ನಿಧಿ ಸಮರ್ಪಣಾ ಅಭಿಯಾನದ ಸಂದರ್ಭ ನಾಡಿನ ಜನತೆ ತಮ್ಮ ಸಾಮಥ್ರ್ಯಕ್ಕನುಗುಣವಾಗಿ ಸಹಕರಿಸುವಂತೆ ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‍ನ ಸದಸ್ಯ ಹಾಗೂ ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದರು.

ಶ್ರೀ ರಾಮಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಮಂಗಳವಾರ ಮಡಿಕೇರಿಯಲ್ಲಿ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜ.15 ರಿಂದ 45 ದಿನಗಳ ಅಭಿಯಾನ ದೇಶಾದ್ಯಾಂತ ನಡೆಯಲಿದ್ದು, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತೆರೆಳಿ ನಿಧಿ ಸಂಗ್ರಹಿಸಲಿದ್ದಾರೆ. ಜನತೆ ತಮ್ಮ ಸಾಮಥ್ರ್ಯಕ್ಕನುಗುಣವಾಗಿ ಧನ ಸಹಾಯ ಮಾಡಿ ಸಹಕರಿಸಬೇಕು. ಆ ಮೂಲಕ ರಾಮರಾಜ್ಯದ ಕನಸು ನನಸಾಗುವಂತೆ ಮಾಡಬೇಕೆಂದು ಸ್ವಾಮೀಜಿ ಹೇಳಿದರು.

ಕಾರ್ಯಾಲಯ ಉದ್ಘಾಟನೆ: ಇದಕ್ಕೂ ಮುನ್ನ ಗೋಪೂಜೆ ನೆರವೇರಿಸಿದ ಶ್ರೀಗಳು, ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಸಮೀಪ ಅಯೋಧ್ಯೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯವನ್ನು ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು, ಹಲವು ಹೋರಾಟಗಳ ಫಲವಾಗಿ ರಾಮಭಕ್ತರ ಕನಸ್ಸು ನನಸಾಗುವ ಕಾಲ ಸನ್ನಿಹಿತವಾಗಿದೆ ಎಂದು ನುಡಿದರು.

ಕಾಯ್ದೆ ಸ್ವಾಗತಾರ್ಹ: ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ತುಂಬು ಹೃದಯದಿಂದ ಸ್ವಾಗತಿಸುವುದಾಗಿ ಹೇಳಿದರು.

ಈ ಸಂದರ್ಭ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀ ಬೋಧಸ್ವರೂಪಾನಂದಜೀ ಮಹಾರಾಜ್, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮೈಸೂರು ರಾಮಕೃಷ್ಣ ಆಶ್ರಮದ ಶ್ರೀ ವಿಶ್ವವಿಧಾನಂದ ಮಹಾರಾಜ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ನ.ಸೀತಾರಾಮ, ಜಿಲ್ಲಾ ಸಂಘ ಚಾಲಕ ಚಕ್ಕೇರ ಮನು ಕಾವೇರಪ್ಪ, ಕೊಡಗು ಜಿಲ್ಲಾ ವಿಶ್ವಹಿಂದೂ ಪರಿಷದ್ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.