Header Ads Widget

Responsive Advertisement

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ


ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶೇ.ನೂರಕ್ಕೆ ನೂರು ಫಲಿಂತಾಂಶ ಪಡೆದ ಕಾಲೇಜುಗಳಿಗೆ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.

ಪೆÇನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಬೋಧಸ್ವರೂಪಾನಂದಜೀ ಮಹಾರಾಜ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಬಾಹುಬಲ, ಬುದ್ಧ್ದಿಬಲ, ಆತ್ಮಬಲ ಎಂಬ ವಿಚಾರವಾಗಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಬಗ್ಗೆ ತಿಳಿಸಿದರು.
ಪತ್ರಕರ್ತರಾದ ಬಿ.ಜಿ.ಅನಂತಶಯನ ಅವರು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ಅಂಕಗಳಿಸುವುದರ ಜೊತೆಗೆ ನಿರ್ದಿಷ್ಟ ಗುರಿ ಇರಬೇಕು ಎಂದರು. ಪ್ರಸ್ತುತ ಸಮಾಜದಲ್ಲಿ ಹಲವಾರು ಸಮಸ್ಯೆಗಳು ಇರುವುದನ್ನು ಕಾಣಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಷ್ಣುಮೂರ್ತಿ ಅವರು 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಮೊದಲನೆ ಸ್ಥಾನವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು. ಅಖಿಲಾ ಪ್ರಾರ್ಥಿಸಿದರು. ಉಪನ್ಯಾಸಕರಾದ ನಂದೀಶ್ ನಿರೂಪಿಸಿದರು. ಬೆಳ್ಳಿಯಪ್ಪ ಅವರು ಸ್ವಾಗತಿಸಿ, ವಂದಿಸಿದರು.