Header Ads Widget

Responsive Advertisement

ಭಾರತೀಯ ಪ್ರಜೆಗಳಿಗೆ ತಮ್ಮನ್ನು ತಾವೇ ಆಳಿಕೊಳ್ಳುವ ಅವಕಾಶ ದೊರೆತ ಪವಿತ್ರ ದಿನ

72ನೇ ವರುಷದ ಸಡಗರದಲ್ಲಿ ಭಾರತದ ಗಣರಾಜ್ಯೋತ್ಸವ ವಿಶೇಷ ಲೇಖನ:


ಪ್ರತಿವರ್ಷ ಜನವರಿ 26ರಂದು ಭಾರತೀಯ ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ 26 ಭಾರತದಾದ್ಯಂತ ಸರ್ಕಾರಿ ರಜಾ ದಿನ.

ಭಾರತೀಯ ಪ್ರಜೆಗಳಿಗೆ ತಮ್ಮನ್ನು ತಾವೇ ಆಳಿಕೊಳ್ಳುವ ಅವಕಾಶ ದೊರೆತ ಪವಿತ್ರ ದಿನ. ಬ್ರಿಟಿಷರ ದಾಸ್ಯದಿಂದ ಮುಕ್ತಗೊಂಡ ಹಿಂದೂಸ್ತಾನಕ್ಕೆ, ಸ್ವಾತಂತ್ರ‍್ಯ ಸಿಕ್ಕು ಎರಡೂವರೆ ವರ್ಷಗಳ ಬಳಿಕ ಮಹಾ ಸಂವಿಧಾನವೊಂದು ಅರ್ಪಿತವಾಯ್ತು. ಅಂದು ಭಾರತದ ಪ್ರಜೆಗಳು ಸ್ವತಃ ತಮಗೇ ಪ್ರಭುಗಳಾದರು. ಪ್ರಜೆಗಳೇ ಪ್ರಭುಗಳಾದ 1950ರ ಜನವರಿ 26ರ ದಿನವನ್ನು ಗಣರಾಜ್ಯದಿನ ಎಂದು ಘೋಷಿಸಲಾಯಿತು. ಮೊದಲು ಭಾರತದಲ್ಲಿ 1930ನೇ ಇಸವಿಯಲ್ಲಿ ಜನವರಿ 26 “ಸ್ವಾತಂತ್ರö್ಯ ದಿನ”ವನ್ನು “ಪೂರ್ಣ ಸ್ವರಾಜ್” ದಿನವನ್ನಾಗಿ ಆಚರಿಸಲಾಗುತ್ತಿತ್ತು. ಈ ಪೂರ್ಣ ಸ್ವರಾಜ್ ದಿನದ ನೆನಪಿಸುಕೊಳ್ಳುವ ಸಲುವಾಗಿ ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುತ್ತದೆ. (ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತ ಗಣರಾಜ್ಯವಾದದ್ದು ಜನವರಿ 26, 1950 ರಂದು)

ಭಾರತದ ಪ್ರಜೆಗಳನ್ನು ಆಳುವ ಶಾಸಕಾಂಗ, ನ್ಯಾಯ ಒದಗಿಸುವ ನ್ಯಾಯಾಂಗ ಹಾಗೂ ಜನರಿಗಾಗಿ ಕೆಲಸಮಾಡುವ ಕಾರ್ಯಾಂಗಗಳು ಹೇಗಿರಬೇಕು, ಯಾವೆಲ್ಲ ನೀತಿ ನಿಯಮ ಕಟ್ಟಳೆಗಳನ್ನು ಅವರು ಪಾಲಿಸಬೇಕು ಎಂಬೆಲ್ಲ ಸೂಚನೆಗಳನ್ನು ಹಾಕಿಕೊಟ್ಟ ಸಮಗ್ರ ಮಾಹಿತಿಗಳ ಗುಚ್ಚವೇ ಭಾರತದ ಸಂವಿಧಾನ. ಆಗಸ್ಟ್ 15, 1947ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ 29ರಂದು ಡಾ. ಅಂಬೇಡ್ಕರ್ ರವರ ನೇತೃತ್ವದಲ್ಲಿ ಎರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ 4, 1947ರಂದು ಶಾಸನಸಭೆಯಲ್ಲಿ ಮಂಡಿಸಿತು. ನವೆಂಬರ್ 26,1949 ರಂದು ಅಂಗೀಕರಿಸಲ್ಪಟ್ಟು ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ 26 1950ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಡಾ.ಬಿ.ಆರ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲ್ಪಟ್ಟ ಈ ಸಂವಿಧಾನ, ಡಾ.ರಾಜೇಂದ್ರ ಪ್ರಸಾದ್‌ರ ಅಧ್ಯಕ್ಷತೆಯಲ್ಲಿ 1950, ಜನವರಿ 26ರಂದು ಅಂಗೀಕರಿಸಲ್ಪಟ್ಟಿತ್ತು.

ಭಾರತ ದೇಶದಲ್ಲಿ ಸಂವಿಧಾನ ಜಾರಿಯಲ್ಲಿ ಬಂದ ಮೇಲೆ ಪ್ರಜೆಗಳದೇ ಸರ್ಕಾರ ಅಸ್ತಿತ್ವಕ್ಕೆ ಬಂತು. ದೇಶದಲ್ಲಿ ತಮಗೆ ಸ್ವಾತಂತ್ರ‍್ಯವಿದೆ, ತಮ್ಮನ್ನಾಳುವವರನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ ಎಂಬ ಸಂತಸ ಇಡೀ ದೇಶದ ಜನರಲ್ಲಿ ಪ್ರತಿಫಲಿಸಿತ್ತು. ಜನರಲ್ಲಿ ನಿಧಾನವಾಗಿ ಸಂವಿಧಾನ, ಸರಕಾರದ ಮೇಲೆ ವಿಶ್ವಾಸ ಬೆಳೆಯಲು ಪ್ರಾರಂಭವಾಯಿತು. ಒಕ್ಕೂಟ ವ್ಯವಸ್ಥೆಯಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡು ಬಹುಶೃತ ಸಮಾಜ ಸಂಸ್ಥಾಪನೆಗೆ ನೀರೆರೆಯುವುದೇ ಸಂವಿಧಾನದ ಪ್ರಧಾನ ಆಶಯ. ಇಂತಹ ಸಮಾಜದ ಬಾಳು-ಬದುಕಿಗೆ ಬೇಕಾದ ರೀತಿ ರಿವಾಜುಗಳು, ಪಾರಂಪರಿಕ ವಿಧಿ ವಿಧಾನಗಳು, ನಾಗರಿಕರ ಕಲ್ಯಾಣಕ್ಕಾಗಿ ಕಾನೂನು ಹಾಗೂ ನಿಯಮಾವಳಿಗಳನ್ನು ಲಿಖಿತ ರೂಪದಲ್ಲಿ ದಾಖಲಿಸಿ ಪ್ರತಿಯೊಬ್ಬ ಭಾರತೀಯನೂ ಸರಿಸಮಾನ ಎಂಬ ಭಾವ ಬಿತ್ತಿದ ವಿಧಾನಕ್ಕೆ ಇಡೀ ದೇಶದ ಅನುಮೋದನೆ ಸಿಕ್ಕಿತ್ತು. ಹೀಗಾಗಿಯೇ ಭಾರತದ ಸಂವಿಧಾನ ಭಾರತೀಯರೆಲ್ಲರಿಗೆ ಒಂದು ಧರ್ಮಗ್ರಂಥ.

ಗಣರಾಜ್ಯೋತ್ಸವ ದಿನಾಚರಣೆಯನ್ನು ಭಾರತದ ರಾಜಧಾನಿಯಾದ ದೆಹಲಿಯ ರಾಜ್‌ಪಥ್‌ನಲ್ಲಿ, ಭಾರತದ ರಾಷ್ಟ್ರಪತಿಯ ಸಮ್ಮುಖದಲ್ಲಿ ನಡೆಯುತ್ತದೆ.  ಜನವರಿ 26ರಂದು ಭಾರತಕ್ಕೆ ಗೌರವವನ್ನು ಸೂಚಿಸುವ ಮೆರವಣಿಗೆ ಅಲ್ಲಿ ನಡೆಯುತ್ತದೆ. ದೇಶದ ಎಲ್ಲಾ ರಾಜ್ಯಗಳಲ್ಲೂ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ. 

 

Search Coorg Media: Coorg's Largest Online Media Network