ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಐದು ವರ್ಷದೊಳಗಿನ 39,820 ಮಕ್ಕಳು ಇದ್ದು, ಇವರಲ್ಲಿ 4,400 ನಗರ ಮತ್ತು 35,420 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೊಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಒಟ್ಟು 464 ಬೂತ್ಗಳನ್ನು ತೆರೆಯಲಾಗಿದೆ. ಅಲ್ಲದೆ 48 ಟ್ರಾನ್ಸಿಸ್ಟ್ ತಂಡಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,964 ಮಂದಿ ಲಸಿಕೆ ಹಾಕುವವರು, 86 ಮಂದಿ ಮೇಲ್ವಿಚಾರಕರು, 928 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಆರ್ಸಿಎಚ್ ಅಧಿಕಾರಿ ಡಾ.ಗೋಪಿನಾಥ, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ, ಡಾ. ಮಹೇಶ್, ಡಾ.ಮಂಜುನಾಥ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಇತರರು ಇದ್ದರು.