Header Ads Widget

ಸರ್ಚ್ ಕೂರ್ಗ್ ಮೀಡಿಯ

ಗ್ರಾ.ಪಂ.ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಗೆ ದಿನಾಂಕ ನಿಗಧಿ


ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಮೊದಲನೇ ಅವಧಿಗೆ ಮೀಸಲಾತಿಯನ್ನು ನಿಗಧಿಪಡಿಸಲು ರಾಜ್ಯ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಆ ದಿಸೆಯಲ್ಲಿ ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಜನವರಿ, 27 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿ.ಪಂ.ಸಭಾಂಗಣದಲ್ಲಿ ಎಲ್ಲಾ ಸದಸ್ಯರುಗಳ ಸಭೆ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಜನವರಿ, 27 ರಂದು ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರದ ರೈತ ಭವನದಲ್ಲಿ ಸಭೆ ನಡೆಯಲಿದೆ.

ವಿರಾಜಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಜನವರಿ, 28 ರಂದು ಮಧ್ಯಾಹ್ನ 2.30 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಸದಸ್ಯರುಗಳ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.