Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಿಬ್ಬಂದಿ ಸೇವಾ ನಿಯಮ ಕುರಿತು ಶಿಕ್ಷಣ ಕಾರ್ಯಕ್ರಮ


ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಟ್ಟಣ ಸಹಕಾರ ಬ್ಯಾಂಕ್, ಎಪಿಸಿಎಂಎಸ್, ಪತ್ತಿನ ಸಹಕಾರ ಸಂಘ ಹಾಗೂ ಮಾರಾಟ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಿಬ್ಬಂದಿ ಸೇವಾ ನಿಯಮ ಕುರಿತು ಶಿಕ್ಷಣ ಕಾರ್ಯಕ್ರಮವು ಫೆಬ್ರವರಿ, 12 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ನಿರ್ದೇಶಕರು ಇತರರು ಪಾಲ್ಗೊಳ್ಳಲಿದ್ದಾರೆ.