ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಮಾನ್ಯ ಸಹಕಾರ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರು ಮಂಗಳವಾರ ಉದ್ಘಾಟನೆ ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ.ಪಿ.ಗಣಪತಿ ಇತರರು ಉಪಸ್ಥಿತರಿದ್ದರು. ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೆ.ಎಸ್.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು.
ಕೂಡಿಗೆ ಸೈನಿಕ ಶಾಲೆಗೆ ಸಚಿವರ ಭೇಟಿ: ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಮತ್ತು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕಾರ್ಯ ನಿಮಿತ್ತ ಇಂದು ಕೇಂದ್ರ ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ಕೊಡಗು ಸೈನಿಕ ಶಾಲೆಗೆ ತೆರಳಿ ಶಾಲೆಯ ಮಕ್ಕಳಿಗೆ ಪಾಠ, ಆಟ, ಶಿಸ್ತು, ಸೈನಿಕ ತರಬೇತಿ ನೀಡುವ ಬಗ್ಗೆ ಮಾಹಿತಿ ಪಡೆದರು.
ಮೈಸೂರು ಗುಂಪು ವಸತಿ ಯೋಜನೆಯ ನೀಲನಕ್ಷೆ ಬಿಡುಗಡೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಗುಂಪು ವಸತಿ ಯೋಜನೆಯ ನೀಲನಕ್ಷೆಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಅವರು ಕೊಡಗಿನಲ್ಲಿ ಬಿಡುಗಡೆ ಮಾಡಿದರು.
ಶಾಸಕರಾದ ಅಪ್ಪಚ್ಚು ರಂಜನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ.ರಾಜೀವ್ ಇತರರು ಉಪಸ್ಥಿತರಿದ್ದರು.