ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಕರಿಕೆ ಹಾಗೂ ಸಂಪಾಜೆ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೇರಳ ರಾಜ್ಯದಲ್ಲಿ ಕೋವಿಡ್ 19 ಹೆಚ್ಚಳವಾಗುತ್ತಿರುವ ಹಿನ್ನೆಲೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.