ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಜನರ ಸಮಸ್ಯೆಗಳನ್ನು ತಳಮಟ್ಟದಿಂದಲೇ ಪರಿಹರಿಸುವಲ್ಲಿ ‘ಜಿಲ್ಲಾಧಿಕಾರಿ ಅವರ ನಡಿಗೆ ಹಳ್ಳಿಯ ಕಡೆಗೆ’ ಕಾರ್ಯಕ್ರಮವು ಮಾರ್ಚ್, 20 ರಂದು ಬೆಳಗ್ಗೆ 10 ಗಂಟೆಯಿಂದ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಭೂಮಾಪನ ಇಲಾಖೆ ಹಾಗೂ ಆಹಾರ ಇಲಾಖೆಗೆ ಸಂಬಂಧಿಸಿದಂತೆ ಪಹಣಿಯಲ್ಲಿನ ಲೋಪದೋóóಷಗಳ ತಿದ್ದುಪಡಿ, ಪೌತಿ ಖಾತೆ, ಸರ್ಕಾರದ ಯೋಜನೆಗಳಾದ ಇಂದಿರಾಗಾಂಧಿ ವೃದ್ದಾಪ್ಯ ವೇತನ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಗ್ರಾಮಗಳಿಗೆ ಸ್ಮಶಾನ ಭೂಮಿ ಕಲ್ಪಿಸುವುದು, ಆಶ್ರಯ ಯೋಜನೆಯಲ್ಲಿ ಜಮೀನು ಕಾಯ್ದಿರಿಸುವ ಬಗ್ಗೆ, ಆಧಾರ್ ಕಾರ್ಡ್ನ ಅನುಕೂಲತೆ ಬಗ್ಗೆ ಮತದಾರ ಪಟ್ಟಿಯ ಪರಿಷ್ಕರಣೆ, ಪ್ರಕೃತಿ ವಿಕೋಪದಿಂದ ಹಾನಿಯಾದ ವಾಸದ ಮನೆಗಳಿಗೆ ಪರಿಹಾರ ಮತ್ತು ಬೆಳೆ ಪರಿಹಾರ ಸಕಾಲ ಯೋಜನೆಯಡಿಯಲ್ಲಿ ಒದಗಿಸಲಾಗುವ ಸೌಲಭ್ಯಗಳ ಬಗ್ಗೆ, ಹದ್ದುಬಸ್ತು ಪೋಡಿ ಮುಕ್ತ ಗ್ರಾಮ, ದರಕಾಸ್ತು, ಮಂಜೂರಾದ ಜಮೀನುಗಳ ದುರಸ್ತಿ (ನಮೂನೆ 1-5 ಮತ್ತು ನಮೂನೆ 6-10) ಮಾಡಿ ಪೋಡಿ ಮಾಡುವುದು ಹಾಗೂ ಪಡಿತರ ಚೀಟಿಯಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದರಿಂದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಗ್ರಾಮಸ್ಥರು, ಗ್ರಾಮದ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಿ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳುವಂತೆ ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಗೋವಿಂದ ರಾಜು ಅವರು ತಿಳಿಸಿದ್ದಾರೆ.
Search Coorg Media
Coorg's Largest Online Media Network