Header Ads Widget

ಸರ್ಚ್ ಕೂರ್ಗ್ ಮೀಡಿಯ

ಸವಿತಾ ಸಮಾಜದಿಂದ ಮಾ.29 ಮತ್ತು 30 ರಂದು ಕ್ರೀಡೋತ್ಸವ ಹಾಗೂ ಸವಿತಾ ಮಹರ್ಷಿ ಜಯಂತಿ


ಕೊಡಗು ಜಿಲ್ಲಾ ಸವಿತಾ ಸಮಾಜದ ವತಿಯಿಂದ ಮಾ.29 ಮತ್ತು 30 ರಂದು ಸಮಾಜ ಬಾಂಧವರಿಗೆ ಕ್ರೀಡೋತ್ಸವ ಹಾಗೂ ಸವಿತಾ ಮಹರ್ಷಿ ಜಯಂತಿ ನಡೆಯಲಿದೆ ಎಂದು ಸಮಾಜದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಎಂ.ಟಿ.ಮಧು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮವನ್ನು ಕಲ್ಬುರ್ಗಿಯ ಸವಿತಾ ಪೀಠದ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ದೊರೇಶ್ ವಹಿಸಲಿದ್ದಾರೆ ಎಂದರು.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಹಾಗೂ ಸವಿತಾ ಸಮಾಜದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.


ಮಾ.30 ರಂದು ಸಂಜೆ 3.30ಕ್ಕೆ ಕ್ರೀಡೋತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸವಿತಾ ಸಮಾಜದ ರಾಜ್ಯಾಧ್ಯಕ್ಷ ಸಂಪತ್, ಮಡಿಕೇರಿ ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಗರಸಭೆಯ ಪೌರಾಯುಕ್ತ ರಾಮ್‍ದಾಸ್, ಮಡಿಕೇರಿ ಪ್ರೆಸ್ ಕ್ಲಬ್ ಅಧ್ಯಕ್ಷ ರಮೇಶ್ ಕುಟ್ಟಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.


ಸುಳ್ಯ ತಾಲ್ಲೂಕಿನ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ್ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದು, ಅತಿಥಿಗಳಾಗಿ ಸುಳ್ಯ ತಾಲ್ಲೂಕಿನ ಸವಿತಾ ಸಮಾಜದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಸಮಾಜದ ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಸುಂದರಮ್ಮ, ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ಭಾಗವಹಿಸಲಿದ್ದಾರೆ ಎಂದರು.


ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ಕ್ರೀಡಾಧ್ಯಕ್ಷ ಮಧು ಚೆಟ್ಟಿಮಾನಿ ಮಾತನಾಡಿ, ಮಾ. 29 ರಂದು ಕ್ರಿಕೆಟ್ ಹಾಗೂ ಥ್ರೋಬಾಲ್ ಪಂದ್ಯಾವಳಿಗೆ ಬೆಳಗ್ಗೆ 9.30ಕ್ಕೆ ಚಾಲನೆ ದೊರೆಯಲಿದ್ದು, ಸೂಪರ್ 9 ಕ್ರಿಕೆಟ್ ಪಂದ್ಯಾವಳಿಗೆ ಕೊಡಗಿನಲ್ಲಿ ನೆಲೆಸಿರುವ ಸಮಾಜ ಬಂಧವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಓ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಮಾ. 23ಕ್ಕೆ ನಗರದ ಹೊಟೇಲ್ ಸಮುದ್ರದಲ್ಲಿ ಟೈಸ್ ಪ್ರಕ್ರಿಯೆ ನಡೆಯಲಿದ್ದು, ಥ್ರೋಬಾಲ್ ಪಂದ್ಯಾವಳಿಗೆ ಕ್ರೀಡೋತ್ಸವದ ದಿನದಂದೆ ಟೈಸ್ ಪ್ರಕ್ರಿಯೆ ನಡೆಯಲಿದೆ ಎಂದರು.


ಮಾ. 30 ರಂದು ವಿವಿಧ ಕ್ರೀಡಾ ಕೂಟಗಳು ನಡೆಯಲಿದ್ದು, ಐದು ವರ್ಷ ಒಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, ಒಂದನೇ ತರಗತಿಯಿಂದ ಎರಡನೇ ತರಗತಿ ಮಕ್ಕಳಿಗೆ ಕಪ್ಪೆ ಜಿಗಿತ, ಮೂರನೇ ತರಗತಿಯಿಂದ ನಾಲ್ಕನೇ ತರಗತಿ ಮಕ್ಕಳಿಗೆ 50 ಮೀ. ಓಟ, ಐದನೇ ತರಗತಿಯಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ 100 ಮೀ. ಓಟ, ಎಂಟನೇ ತರಗತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ 200 ಮೀ. ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಯುವಕ ಯುವತಿಯರಿಗಾಗಿ ಭಾರದ ಗುಂಡು ಎಸೆತ, ಮಹಿಳೆಯರಿಗಾಗಿ ಬಾಂಬ್ ಇನ್ ದ ಸಿಟಿ, 60 ವರ್ಷ ಮೇಲ್ಪಟ್ಟವರಿಗೆ ವಿಶೇಷ ಆಟೋಟ, ಪುರುಷ ಹಾಗೂ ಮಹಿಳೆಯರಿಗಾಗಿ ಹಗ್ಗ ಜಗ್ಗಾಟ ನಡೆಯಲಿದ್ದು, ಎರಡು ದಿನವು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.


ಕ್ರಿಕೆಟ್ ಹಾಗೂ ಥ್ರೋಬಾಲ್ ಪಂದ್ಯಾವಳಿಗೆ ಆಗಮಿಸುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಹಾಗೂ ಸಂಘದ ದಾಖಲಾತಿ ತರಬೇಕು. ಹೆಚ್ಚಿನ ಮಾಹಿತಿಗೆ 9480007064, 7204664849, 9036649235 ಸಂಪರ್ಕಿಸಬಹುದಾಗಿದೆ.


ಸುದ್ದಿಗೋಷ್ಠಿಯಲ್ಲಿ ಸಮಾಜ ಜಿಲ್ಲಾ ಉಪಾಧ್ಯಕ್ಷ ಎಂ.ಜಿ. ಚರಣ್, ಮಡಿಕೇರಿ ನಗರಾಧ್ಯಕ್ಷ ಬಿ.ಆರ್. ಗಣೇಶ್, ಕಾರ್ಯದರ್ಶಿ ಅವಿನಾಶ್ ಬೊಟ್ಲಪ್ಪ ಹಾಗೂ ಹಿರಿಯ ಸದಸ್ಯ ಹೆಚ್.ಆರ್.ತಿಮ್ಮಯ್ಯ ಉಪಸ್ಥಿತರಿದ್ದರು.


Search Coorg Media

Coorg's Largest Online Media Network