Header Ads Widget

ಸರ್ಚ್ ಕೂರ್ಗ್ ಮೀಡಿಯ

ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಗುಲಾಬಿ ಆಂದೋಲನ


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವಿರಾಜಪೇಟೆ ತಾಲ್ಲೂಕು, ಗೋಣಿಕೊಪ್ಪ, ಇವರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನವು ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ನಡೆಯಿತು.


ಈ ಆಂದೋಲನದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಯತಿರಾಜ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಸ್ವಾಗತಿಸಿ ಗುಲಾಬಿ ಆಂದೋಲನದ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ವಿರಾಜಪೇಟೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಸುನೀಲ್ ಆಂದೋಲನ ಉದ್ಘಾಟಿಸಿ ಮಾತನಾಡಿದರು. ಆಶಾ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಪೋಲೀಸ್ ಇಲಾಖೆಯವರು ಭಾಗವಹಿಸಿದ್ದರು.

ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮವು ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಿಂದ ಹೊರಟು ಸರ್ಕಾರಿ ಬಸ್ಸು ನಿಲ್ದಾಣ, ಹಾಗೂ ಖಾಸಗಿ ಬಸ್ಸು ನಿಲ್ದಾಣ, ಮಾರುಕಟ್ಟೆ ರಸ್ತೆ ಮಾರ್ಗವಾಗಿ ಸಾಗಿತು.

ಕೋಟ್ಪಾ 2003 (ಸಿಗರೇಟ್ ಮತ್ತು ಇತ್ತರೆ ತಂಬಾಕು ಉತ್ಪನ್ನಗಳ ಕಾಯ್ದೆ 2003) ಹೋಟೇಲ್, ಬಾರ್, ಅಂಗಡಿ ಮತ್ತು ಪಾನ್ ಶಾಪ್ಗಳಲ್ಲಿ ಸೆಕ್ಷನ್ 4 (60*45) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. (ಸೆಕ್ಷನ್ 5) ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಗುಟ್ಕಾ ಪ್ಯಾಕೆಟ್ಗಳನ್ನು ಬಹಿರಂಗವಾಗಿ ಪ್ರದರ್ಶಿಸಿ ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರ, (ಸೆಕ್ಷನ್ 6ಎ) 18 ವಯಸ್ಸಿನ ಒಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧ, ಸೆಕ್ಷನ್ 6(ಬಿ) ಶಿಕ್ಷಣ ಸಂಸ್ಥೆಗಳ 100 ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ, ಸೆಕ್ಷನ್-7 ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕುಗಳ ಮೇಲೆ ಶೇ.85 ರಷ್ಟು ಅರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದರ ಮೇಲೆ ನಿಷೇಧ. ಆಶಾ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಗುಲಾಬಿ ಹೂ ನೀಡುವುದರ ಮುಖಾಂತರ ವಿವಿಧ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿ ಜನಜಾಗೃತಿ ಮೂಡಿಸಿದರು.

Search Coorg Media

Coorg's Largest Online Media Network