Header Ads Widget

Responsive Advertisement

ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ


ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳೆಲೆ, ಐಶ್ವರ್ಯ ಚಾರಿಟೇಬಲ್ ಟ್ರಸ್ಟ್, ಜೆಸಿಐ ಪೊನ್ನಂಪೇಟೆ, ರಕ್ತನಿಧಿ ಕೇಂದ್ರ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಹಾಗೂ ಬಾಳೆಲೆ, ನಿಟ್ಟೂರು, ಪೊನ್ನಪ್ಪ ಸಂತೆ, ಕಿರುಗೂರು, ಮಾಯಮುಡಿ ಗ್ರಾಮ ಪಂಚಾಯತ್ಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಬುಧವಾರ ನಡೆಯಿತು.

ಕೋವಿಡ್-19 ತೀವ್ರವಾಗಿ ಹಬ್ಬುತ್ತಿರುವ ಕಾರಣ ಆಕ್ಸಿಜನ್ ಕೊರತೆಯಿಂದ ಹಲವು ಜನರು ಸಾಯುತ್ತಿರುವ ಕಾರಣ ಗಿಡಗಳನ್ನು ಬೆಳೆಸುವುದರ ಮೂಲಕ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಶಿಬಿರದಲ್ಲಿ ಭಾಗವಹಿಸಿದ ದಾನಿಗಳು ಗಿಡ ನೆಡುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಈ ಶಿಬಿರದಲ್ಲಿ 60 ಮಂದಿ ರಕ್ತದಾನ ಮಾಡಿದರು.

ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಾಧಿಕಾರಿ ಡಾ.ಕರುಂಬಯ್ಯ, ದಿಲನ್ ಚಂಗಪ್ಪ, ಗಾಯ ಜೋಯಪ್ಪ, ಐಶ್ವರ್ಯ ಚಾರಿಟೇಬಲ್ ಟ್ರಸ್ಟ್ನ ಮುಖ್ಯ ಆಡಳಿತಾಧಿಕಾರಿಗಳು ವಿಶ್ವನಾಥ್, ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳೆಲೆ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್ ಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರುಗಳು ವಿವಿಧ ಸಂಘ-ಸಂಸ್ಥೆಗಳು, ಆಸ್ಪತ್ರೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಇತರರು ಇದ್ದರು.


Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,