Header Ads Widget

ಸರ್ಚ್ ಕೂರ್ಗ್ ಮೀಡಿಯ

ಪೊನ್ನಂಪೇಟೆ ತಾಲ್ಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ

ಪೊನ್ನಂಪೇಟೆ ತಾಲ್ಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ


ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು, ಕಾನೂರು, ನಾಲ್ಕೇರಿ, ನಿಟ್ಟೂರು, ಬಾಳಲೆ, ಪೊನ್ನಪ್ಪಸಂತೆ, ಮಾಯಮುಡಿ, ತಿತಿಮತಿ ಮತ್ತು ದೇವರಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಆಯಾಯ ಪಂಚಾಯತಿ ವ್ಯಾಪ್ತಿಯಲ್ಲಿನ ಅಧಿಕಾರಗಳ ಜೊತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಶನಿವಾರ ಸಮಾಲೋಚನೆ ನಡೆಸಿದರು.

ಕೋವಿಡ್-19 ಮಹಾಮಾರಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು. ಹಾಗೆಯೇ ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಸಕರು ನಿರ್ದೇಶನ ನೀಡಿದರು.

ತಹಶೀಲ್ದಾರ್ ಯೋಗಾನಂದ, ತಾ.ಪಂ.ಆಡಳಿತಧಿಕಾರಿ, ತಾ.ಪಂ.ಇಒ, ತಾಲ್ಲೂಕು ವೈದ್ಯಧಿಕಾರಿ, ನೋಡಲ್ ಅಧಿಕಾರಿ, ಪೆÇಲೀಸ್ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೋವಿಡ್ ಜಾಗೃತಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ಇತರರು ಇದ್ದರು.

ಆರೋಗ್ಯ ಪರೀಕ್ಷಾ ಕಿಟ್ ವಿತರಣೆ: ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಆರೋಗ್ಯ ಪರೀಕ್ಷಾ ಕಿಟ್ ವಿತರಿಸಿದರು. ತಹಶೀಲ್ದಾರ ಯೋಗಾನಂದ, ಟಿಎಚ್ಒ ಡಾ.ಯತಿರಾಜ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,