Header Ads Widget

Responsive Advertisement

ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಸಿದ್ದರಾಗಲು ದೀಕ್ಷಾ ಆ್ಯಪ್ ಬಿಡುಗಡೆ

ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಸಿದ್ದರಾಗಲು ದೀಕ್ಷಾ ಆ್ಯಪ್ ಬಿಡುಗಡೆ


ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ದೀಕ್ಷಾ ಆ್ಯಪ್ ಅನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಮಂಗಳವಾರ ಲೋಕಾರ್ಪಣೆ ಮಾಡಿದರು.

ಅವರು ಇದೇ ಸಂದರ್ಭದಲ್ಲಿ ಮಾತನಾಡಿ,  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ಪರೀಕ್ಷಾ ಅಭ್ಯಾಸ ಕಾರ್ಯಕ್ರಮ ಇನ್ನು ಮುಂದೆ ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ ಲಭ್ಯವಾಗಲಿದೆ ಎಂದರು.

ಈ ಬಗ್ಗೆ ಮಾತನಾಡಿದ ಸಚಿವರು,  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಹಾಗೂ ಸಿಇಟಿ ನೀಟ್  ಸೇರಿದಂತೆ ಹಲವಾರು ಪ್ರವೇಶ ಪರೀಕ್ಷೆಗಳಿಗೆ  ಆತ್ಮವಿಶ್ವಾಸದಿಂದ ಸಿದ್ದರಾಗಲು ಈ ಆ್ಯಪ್ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆ್ಯಪ್ (DIKSHA-app) 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಷಾ ಆ್ಯಪ್ ನಲ್ಲಿ ಲಭ್ಯವಿದ್ದು, SSLC ವಿದ್ಯಾರ್ಥಿಗಳಿಗೆ ಫೋಕಸ್ ಎಂಬ ಪುನರ್‌ ಮನನ ಮತ್ತು ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ಅಭ್ಯಾಸ’ ಎಂಬ ಕಾರ್ಯಕ್ರಮಗಳು ಆ್ಯಪ್ ನಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಹಾಯ ಮಾಡಲಿವೆ. ಪಿಸಿಎಂಬಿ ವಿಷಯಕ್ಕೆ ಸುಮಾರು ಒಂಬತ್ತು ಸಾವಿರ ಬಹು ಆಯ್ಕೆ ಪ್ರಶ್ನೆಗಳಿಗೆ ಅಧ್ಯಾಯವಾರು ಒದಗಿಸಲಾಗಿದೆ ಎಂದರು.

DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದು. ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಲ್ಲಿ DIKSHA ಆಪ್ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು: https://bit.ly/KA-diksha ಒತ್ತಿ ದೀಕ್ಷಾ ಆ್ಯಪ್  ಡೌನ್ಲೋಡ್ ಮಾಡಿಕೊಳ್ಳಬಹುದು.ಬಳಿಕ ಆ್ಯಪ್ ಅಥವಾ ಪೋರ್ಟಲ್ ನಲ್ಲಿ ಬೇಕಿರುವ ಮಂಡಳಿ, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಬೇಕು. 1 ರಿಂದ 12 ನೇ ತರಗತಿಗಳಿಗೆ ಪಠ್ಯಾಂಶಗಳು, ಅಂದರೆ ಇ ಪಠ್ಯಪುಸ್ತಕಗಳು (ಇಟಿಬಿ) ವಿವರಣಾತ್ಮಕ ಪಠ್ಯಾಂಶಗಳು, ಕಲಿಕಾ ಸಂಪನ್ಮೂಲಗಳು, ಅಭ್ಯಾಸ ಪ್ರಶ್ನೆಗಳು, ಪ್ರಶ್ನೆ ಕೋಶ ಮತ್ತು ಶಿಕ್ಷಕರಿಗೆ ಪಾಠ ಯೋಜನೆ ಇನ್ನಿತರ ಸಂಪನ್ಮೂಲಗಳನ್ನು ಈ ಪೋರ್ಟಲ್ ನಲ್ಲಿ ಅಳವಡಿಸಲಾಗಿದೆ.

ರಾಜ್ಯದಲ್ಲಿ 10ನೇ ತರಗತಿಯ ಸುಮಾರು 9 ಲಕ್ಷ ವಿದ್ಯಾರ್ಥಿಗಳು 1 ರಿಂದ 10ನೇ ತರಗತಿಯ ಸುಮಾರು 85 ಲಕ್ಷ ವಿದ್ಯಾರ್ಥಿಗಳು ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಸುಮಾರು 13 ಲಕ್ಷ ವಿದ್ಯಾರ್ಥಿಗಳು ದೀಕ್ಷಾ ಆ್ಯಪ್ ನ ಪ್ರಯೋಜನ ಪಡಯಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದರು.


Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,