Header Ads Widget

ಸರ್ಚ್ ಕೂರ್ಗ್ ಮೀಡಿಯ

ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿ ಪರಿಸರ ದಿನಾಚರಣೆ

ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿ  ಪರಿಸರ ದಿನಾಚರಣೆ




ಪರಿಸರ ದಿನಾಚರಣೆ ಪ್ರಯುಕ್ತ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿ ಇತ್ತಿಚೆಗೆ ಗಿಡ ನೆಡಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಇತರರು ಇದ್ದರು.

 ಕಲಾಭವನದಲ್ಲಿ ಪರಿಸರ ದಿನಾಚರಣೆ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ವಲಯದ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಕುಶಾಲನಗರ ಕಲಾಭವನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

 ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕೊಡಗು ಜಿಲ್ಲಾ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ರವರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು. ಕೋವಿಡ್ 19ರ ನಿಯಮದಂತೆ  ಸಸಿ ನೆಡುವುದರ ಮೂಲಕ ಆಚರಿಸಲಾಯಿತು. 

ಉಪವಲಯ ಅರಣ್ಯಾಧಿಕಾರಿ ಅನೀಲ್ ಡಿಸೋಜ, ಅರಣ್ಯ ರಕ್ಷಕರಾದ ಟಿ.ಕೆ.ಸಚೀನ್, ವಿ.ಎಸ್.ಮಂಜೇಗೌಡ, ಪಿಅರ್‍ಟಿ ಸಿಬ್ಬಂದಿಗಳಾದ ರವಿ, ಸುನೀಲ್, ಕೌಶಿಕ್, ಲೋಕೇಶ್, ಸುರೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಉಪಸ್ಥಿತರಿದ್ದರು.


Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,