Header Ads Widget

ಸರ್ಚ್ ಕೂರ್ಗ್ ಮೀಡಿಯ

ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯ ಪ್ರದೇಶ ದಲ್ಲಿ ಬಿಡುಗಡೆ ಮಾಡಲಾಯಿತು

ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯ ಪ್ರದೇಶ ದಲ್ಲಿ ಬಿಡುಗಡೆ ಮಾಡಲಾಯಿತು

   


ಕುಶ ಆನೆಯನ್ನು ದುಬಾರೆ ಶಿಬಿರದಿಂದ ಕರೆದೊಯ್ದು ನೆನ್ನೆ ಸಂಜೆ  ಅರಣ್ಯ ಪ್ರದೇಶ ದಲ್ಲಿ ಬಿಡುಗಡೆ ಮಾಡಲಾಗಿದೆ, ಇದರಿಂದ ಕುಶ ಬಂಧಮುಕ್ತ ನಾಗಿದ್ದಾನೆ  ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

    ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯದಲ್ಲಿ ಬಿಡಲು ಈ ಹಿಂದೆ ನಡೆದ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು,

ಅದರಂತೆ ಅಗತ್ಯ ಸಿದ್ಧತೆಗಳನ್ನು ನಡೆಸಿ ಕುಶ  ನನ್ನು ಬಿಡುಗಡೆ ಮಾಡಬೇಕಾದ ಪ್ರದೇಶವನ್ನು ಗುರುತಿಸಿ, ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದೆ

ಎಂದು ಅವರು ತಿಳಿಸಿದ್ದಾರೆ.

    ವಲಯಾರಣ್ಯಾಧಿಕಾರಿ ಅನನ್ಯ ಕುಮಾರ್ ಜೆ, ಉಪ ವಲಯ ಅರಣ್ಯಾಧಿಕಾರಿ ಕೆ ಪಿ ರಂಜನ್ ಹಾಗೂ ಅರಣ್ಯ ಪಶುವೈದ್ಯಾಧಿಕಾರಿ ಡಾಕ್ಟರ್ ವಾಸಿಂ ಮಿರ್ಜಾ ಹಾಗೂ ಅರಣ್ಯ ಇಲಾಖೆಯ ಇತರ ಅಧಿಕಾರಿಗಳು ಕುಶ ಬಿಡುಗಡೆಯ ಸಂದರ್ಭದಲ್ಲಿ ಹಾಜರಿದ್ದು ಬೀಳ್ಕೊಟ್ಟರು. 

                

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,