Header Ads Widget

ಸರ್ಚ್ ಕೂರ್ಗ್ ಮೀಡಿಯ

ಕರಿಕೆ ಚೆಕ್‍ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ

ಕರಿಕೆ ಚೆಕ್‍ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ


ಕೇರಳ ರಾಜ್ಯದಲ್ಲಿ ಕೋವಿಡ್ 19 ಮೂರನೇ ಅಲೆ ಕಂಡುಬರುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಾಲ್ಲೂಕಿನ ಗಡಿಭಾಗ ಕರಿಗೆ ಚೆಕ್‍ಪೋಸ್ಟ್‍ಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.   

ಕೇರಳ ರಾಜ್ಯದಲ್ಲಿ ಕೋವಿಡ್ 19 ಮೂರನೇ ಅಲೆ ಆರಂಭವಾಗುತ್ತಿರುವ ಹಿನ್ನೆಲೆ ಸಾಕಷ್ಟು ಮುನ್ನೆಚ್ಚರ ವಹಿಸಬೇಕಿದೆ. ಆ ದಿಸೆಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಬಳಿಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭಾಗಮಂಡಲ ಹೋಬಳಿ ನಾಡಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಿಬ್ಬಂಧಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.  



ನಂತರ ಭಾಗಮಂಡಲ ಜೇನು ಕೃಷಿ ತರಬೇತಿ ಕೇಂದ್ರಕ್ಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಹಾಗೆಯೇ ಭಗಂಡೇಶ್ವರ ತೋಟಗಾರಿಕಾ ಉತ್ಪಾದಕರ ಸಂಘಕ್ಕೆ ಭೇಟಿ ನೀಡಿದರು. 

ತಹಶೀಲ್ದಾರ್ ಮಹೇಶ್, ತೋಟಗಾರಿಗೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ್, ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್,  ಕಂದಾಯ ನಿರೀಕ್ಷಕರು ಇತರರು ಇದ್ದರು.


Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,