Header Ads Widget

ಸರ್ಚ್ ಕೂರ್ಗ್ ಮೀಡಿಯ

ಎ.ಕೆ.ಸುಬ್ಬಯ್ಯ ಪೊನ್ನಮ್ಮ ದತ್ತಿ ಮತ್ತು ಶೈಕ್ಷಣಿಕ ಟ್ರಸ್ಟ್ ಮತ್ತು ಶಕ್ತಿ ದಿನಪತ್ರಿಕೆ ಸಹಯೋಗದಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಎ.ಕೆ.ಸುಬ್ಬಯ್ಯ ಪೊನ್ನಮ್ಮ ದತ್ತಿ ಮತ್ತು ಶೈಕ್ಷಣಿಕ ಟ್ರಸ್ಟ್ ಮತ್ತು ಶಕ್ತಿ ದಿನಪತ್ರಿಕೆ ಸಹಯೋಗದಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ.


ಬಿಟ್ಟಂಗಾಲ ಆರ್.ಕೆ.ಎಫ್. ನಲ್ಲಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಇಂದು ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಎ.ಕೆ.ಸುಬ್ಬಯ್ಯ ಪೊನ್ನಮ್ಮ ದತ್ತಿ ಮತ್ತು ಶೈಕ್ಷಣಿಕ ಟ್ರಸ್ಟ್ ಮತ್ತು ಶಕ್ತಿ ದಿನಪತ್ರಿಕೆ ಸಹಯೋಗದಲ್ಲಿ  ಸುಮಾರು 46 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ತಲಾ ರೂ.10000 ನಗದು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಎಂ.ಸಿ.ನಾಣಯ್ಯ, ಶ್ರೀ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ನಾಟ್ಯ ಕಲಾವಿದೆ ಯಾಮಿನಿ ಮುತ್ತಣ್ಣ, ಶಕ್ತಿ ಸಂಪಾದಕ ಜಿ.ಚಿದ್ವಿಲಾಸ್, ರಾಜ್ಯ ಹೈಕೋರ್ಟ್ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ಎ.ಎಸ್.ನರೇನ್ ಕಾರ್ಯಪ್ಪ ಮುಂತಾದವರು ಉಪಸ್ಥಿತರಿದ್ದರು.

ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದವರು:

ಮಡಿಕೇರಿ ಲಕ್ಷ್ಮಿ ಪ್ರಸಾದ್ ದಂಪತಿ ಪುತ್ರಿ ಮೌನ ಪಿ.ಎಲ್ ಶೇ.99.5 ಅಂಕ, ಸೋಮವಾರಪೇಟೆಯ ಅಶಿತಾ ಎಂ.ಎನ್.ಶೇ.99.5, ಬೇತ್ರಿ ಸಮೀಪ ಕಿಗ್ಗಾಲುವಿನ ತೀರ್ಥ ತಂಗಮ್ಮ ಶೇ.99.5  ಹಾಗೂ ತೀವ್ರ ಬಡತನದಲ್ಲಿರುವ ಮರಗೋಡುವಿನ ಹನಿಶ್ರೀ ಎಂ.ಎನ್.ಶೇ.54.16 ಅಂಕಗಳಿಸಿದ ವಿದ್ಯಾರ್ಥಿನಿಗೂ ಇಂದು ತಲಾ ರೂ.10 ಸಾವಿರ‌ ವಿತರಿಸಲಾಯಿತು. ಸುಮಾರು 100ಕ್ಕೂ ಅಧಿಕ ಅರ್ಜಿಗಳಲ್ಲಿ ಒಟ್ಟು 45  ವಿದ್ಯಾರ್ಥಿ ಗಳನ್ನು ಆಯ್ಕೆ ಮಾಡಲಾಗಿತ್ತು.

                                                                                                                   ✍️....ಟಿ.ಎಲ್.‌ ಶ್ರೀನಿವಾಸ್‌

       ( ಪತ್ರಕರ್ತರು )

         ಸುದ್ದಿ ಸಂಸ್ಥೆ, ಗೋಣಿಕೊಪ್ಪಲು.

( ಟಿ.ಎಲ್.‌ ಶ್ರೀನಿವಾಸ್‌ )
Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,