Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಂಪಾಜೆ ಚೆಕ್‍ಪೋಸ್ಟ್ ನಲ್ಲಿ ಸೆ.25 ರಂದು ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ

ಸಂಪಾಜೆ ಚೆಕ್‍ಪೋಸ್ಟ್ ನಲ್ಲಿ ಸೆ.25 ರಂದು ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ


ಮಡಿಕೇರಿ ಸೆ.23: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಚೆಂಬು ಭಗವಾನ್ ಸಂಘ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ-75 ಅಮೃತ ಮಹೋತ್ಸವ ಆಚರಣೆ ಪ್ರಯುಕ್ತ ಸೆಪ್ಟೆಂಬರ್, 25 ರಂದು ಸಂಜೆ 3.30 ಗಂಟೆಗೆ ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ ಕಾರ್ಯಕ್ರಮವು ಸಂಪಾಜೆ ಚೆಕ್‍ಪೋಸ್ಟ್ ನಲ್ಲಿ ಚಾಲನೆಗೊಳ್ಳಲಿದೆ. 

ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಮಡಿಕೇರಿ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿ ಸದಸ್ಯರಾದ ಡಾ.ಮನು ಮೆನನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್,   ಮೂರ್ನಾಡು ಭಗವಾನ್ ಬಿಲ್ಡರ್ಸ್ ಸುರೇಶ್ ಮುತ್ತಪ್ಪ, ಚೆಂಬು ಭಗವಾನ್ ಸಂಘದ ಅಧ್ಯಕ್ಷರಾದ ದಿನೇಶ್ ಸಣ್ಣಮನೆ, ಚೆಂಬು ಭಗವಾನ್ ಸಂಘದ ಎನ್.ಸಿ.ಅನಂತ್ ಊರುಬೈಲು, ನೆಹರು ಯುವ ಕೇಂದ್ರದ ಉಪ ನಿರ್ದೇಶಕರಾದ ಎಸ್.ಸಿದ್ದರಾಮಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,