Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೊಡಗಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ : ಮಕ್ಕಳಿಗೆ ಹೂ, ಸಿಹಿ, ವಿಜ್ಞಾನ ಪುಸ್ತಕ, ಗಿಡ ನೀಡಿ ಶಾಲೆಗೆ ಸ್ವಾಗತ

ಕೊಡಗಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ :  ಮಕ್ಕಳಿಗೆ ಹೂ ,ಸಿಹಿ, ವಿಜ್ಞಾನ ಪುಸ್ತಕ, ಗಿಡ ನೀಡಿ ಶಾಲೆಗೆ ಸ್ವಾಗತ :


ಕುಶಾಲನಗರ: ಕೋವಿಡ್ -19  ರ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳು ಶುಕ್ರವಾರ ( ಸೆ.17 ರಂದು) ಆರಂಭಗೊಂಡ ಸಂದರ್ಭದಲ್ಲಿ  ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ  ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಮಾದರಿ ಪ್ರಾಥಮಿಕ  ಶಾಲೆ, ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ  ಸ್ವಾಗತಿಸಿ ಶಾಲೆಗೆ ಬರ ಮಾಡಿಕೊಂಡರು.  

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಾಲಾ ದ್ವಾರದ ಬಳಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹೂವು ಗುಚ್ಛ ನೀಡುವ ಮೂಲಕ ಸ್ವಾಗತಿಸಿ, ಮಕ್ಕಳು ಎಂದಿನಂತೆ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಬೇಕು ಎಂದರು.

ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕಾನಿಂಗ್ ನಿಂದ ತಾಪಮಾನ ಪರೀಕ್ಷಿಸಿ ಸ್ಯಾನಿಟೈಸ್ ನೀಡಿದರು. ನಂತರ  ಶಿಕ್ಷಕರು ಎಲ್ಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಶಾಲೆಯ ಇಕೋ ಕ್ಲಬ್ ಹಾಗೂ ಎನ್.ಎಸ್.ಎಸ್.ಘಟಕದ ವತಿಯಿಂದ ಮಕ್ಕಳಿಗೆ ಬಾಲ ವಿಜ್ಞಾನ ಪುಸ್ತಕ ಹಾಗೂ ಗಿಡಗಳನ್ನು ನೀಡುವ ಮೂಲಕ ಶಿಕ್ಷಕರು ಮಕ್ಕಳನ್ನು ಸ್ವಾಗತಿಸಿದರು.

ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಸಂಯೋಜಕ ಕೆ.ಬಿ.ರಾಧಾಕೃಷ್ಣ, ಮಕ್ಕಳಿಗೆ ಕೋವಿಡ್ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.

ಎನ್ನೆಸ್ಸೆಸ್ ಅಧಿಕಾರಿ ಡಿ.ರಮೇಶ್, ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಶಿಕ್ಷಕರಾದ ದಯಾನಂದ ಪ್ರಕಾಶ್, ಕೆ.ಗೋಪಾಲಕೃಷ್ಣ, ಅನ್ಸಿಲಾ ರೇಖಾ, ಎಸ್.ಎಂ.ಗೀತಾ, ಪಿ.ಅನಿತಾಕುಮಾರಿ ಇದ್ದರು.

ಮಕ್ಕಳು ಶಾಲೆಗೆ ತುಂಬಾ ಖುಷಿಯಿಂದ ಆಗಮಿಸಿ ಸಂಭ್ರಮಿಸಿದರು. ಮೊದಲ ದಿನ ಶಾಲೆಗೆ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ  ಹಾಜರಾಗಿದ್ದು ಕಂಡುಬಂತು.

ಶಿಕ್ಷಕರು ಮಕ್ಕಳನ್ನು  ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದ್ದು ವಿದ್ಯಾರ್ಥಿ ಪೋಷಕರಿಗೆ ತುಂಬಾ ಸಂತಸ ತಂದಿತು. 

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,