Header Ads Widget

ಸರ್ಚ್ ಕೂರ್ಗ್ ಮೀಡಿಯ

13 ನೇ ಅಕ್ಟೋಬರ್ 2021 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಸಾಲ ಸಂಪರ್ಕ ಕಾರ್ಯಕ್ರಮ

13 ನೇ ಅಕ್ಟೋಬರ್ 2021 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಸಾಲ ಸಂಪರ್ಕ ಕಾರ್ಯಕ್ರಮ


ಗೌರವಾನ್ವಿತ ಪ್ರಧಾನಮಂತ್ರಿಗಳು 15 ನೇ ಆಗಸ್ಟ್ 2021 ರಂದು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ  ಮಾತನಾಡುತ್ತ  75 ನೇ ವರ್ಷದ ಸ್ವಾತಂತ್ರ್ಯ ವರ್ಷ ವನ್ನು "ಆಜಾದಿ ಕಾ ಅಮೃತ್ ಮಹೋತ್ಸವ್"  ಎಂದು ವಿವಿಧ  ಕಾರ್ಯಕ್ರಮಗಳ ಮೂಲಕ ಆಚರಿಸಲು ಕೋರಿದ್ದಾರೆ. 

ಇದರಂತೆ ಭಾರತ ಸರ್ಕಾರದ ನಿರ್ದೇಶನ ಮೇರೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯು ಕರ್ನಾಟಕದಲ್ಲಿ 13 ನೇ ಅಕ್ಟೋಬರ್ 2021 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಸಾಲ ಸಂಪರ್ಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಈ ಪ್ರಯುಕ್ತ ಜಿಲ್ಲೆಯಲ್ಲಿ  ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಡಿಸಿಸಿಬಿಗಳು, ಎಂಎಫ್‌ಐಗಳು, ಎನ್‌ಬಿಎಫ್‌ಸಿಗಳು ಮತ್ತು ಖಾಸಗಿ ವಲಯದ ಬ್ಯಾಂಕುಗಳು ಮತ್ತು ನಬಾರ್ಡ್ ಮತ್ತು ಕೆವಿಐಸಿ, ಕೆವಿಐಬಿ ಮತ್ತು ಡಿಐಸಿಯಂತಹ ಇತರ ಸರ್ಕಾರಿ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿವೆ. ಮುಖ್ಯವಾಗಿ ಬ್ಯಾಂಕುಗಳಲ್ಲಿ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸಾಲದ ಅರ್ಜಿಗಳನ್ನು ಸ್ವೀಕರಿಸಲು, ಮಂಜೂರಾತಿ ಅಥವಾ ತಾತ್ವಿಕವಾಗಿ ಮಂಜೂರಾತಿ ಪತ್ರಗಳನ್ನು ವಿತರಿಸಲು ಸಾಲ ಸಂಪರ್ಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. 

ತನ್ನಿಮಿತ್ತ ಇದೆ ಬರುವ ದಿನಾಂಕ 22-10-2021 ರಂದು ಜಿಲ್ಲಾ ಅಗ್ರಣಿ ಬ್ಯಾಂಕ್ ಸಭಾಂಗಣದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್" ದ ಅಂಗವಾಗಿ   ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮವನ್ನು ಎರ್ಪಡಿಸಲಾಗಿದೆ. ಕ್ರೆಡಿಟ್ ಔಟ್‌ರೀಚ್ ಕಾರ್ಯಕ್ರಮದಲ್ಲಿ ಪಿಎಂಎಂವೈ (ಮುದ್ರಾ), ಸ್ಟ್ಯಾಂಡ್ ಅಪ್ ಇಂಡಿಯಾ, ಪಿಎಂ ಸ್ವನಿಧಿ, ಇಸಿಎಲ್‌ಜಿಎಸ್, ಪಿಎಂಇಜಿಪಿ, ಕೃಷಿ ಮೂಲಸೌಕರ್ಯ ನಿಧಿ ಯೋಜನೆ (ಎಐಎಫ್), ಪಶು ಸಂಗೋಪನಾ ಮೂಲ ಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ (ಎಎಚ್‌ಐಡಿಎಫ್), ಕೃಷಿ, ಎಂಎಸ್‌ಎಂಇ, ಚಿಲ್ಲರೆ, ಶಿಕ್ಷಣ, ವಸತಿ ಸಾಲಗಳು ಮತ್ತು ಇತರ ಆತ್ಮನಿರ್ಭರ ಭಾರತ್ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಜೊತೆಗೆ ಪಿಎಂಎಸ್‌ಬಿವೈ, ಪಿಎಂಜೆಜೆಬಿವೈ, ಎಪಿವೈ ನಂತಹ ವಿವಿಧ ಪಿಎಂ ಜನ ಸುರಕ್ಷಾ ಯೋಜನೆಗಳ ಬಗ್ಗೆ ವಿಶೇಷ ಜಾಗೃತಿ ಅಭಿಯಾನವನ್ನು ನಡೆಸಲು ಬ್ಯಾಂಕುಗಳಿಂದ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ತಮ್ಮ ತಮ್ಮ ಬ್ಯಾಂಕುಗಳಲ್ಲಿ ಹೊಸದಾಗಿ ಸಾಲ ಬೇಕಿದ್ದರೆ ಸಾಲದ ಅರ್ಜಿ ಗಳನ್ನು ಸಲ್ಲಿಸಲು ಲೀಡ್ ಬ್ಯಾಂಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ತ್ವರಿತವಾಗಿ ಮಂಜೂರಾತಿ ಅಥವಾ ತಾತ್ವಿಕವಾಗಿ ಮಂಜೂರಾತಿ ಪತ್ರಗಳನ್ನು ಅಂದು ವಿತರಿಸಲು  ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,