Header Ads Widget

ಸರ್ಚ್ ಕೂರ್ಗ್ ಮೀಡಿಯ

ಆಜಾ಼ದಿ ಕಾ ಅಮೃತ ಮಹೋತ್ಸವ: ಭಾರತದ ಸ್ತ್ರೀರತ್ನಗಳು ಕೃತಿ ಲೋಕಾರ್ಪಣೆ

ಆಜಾ಼ದಿ ಕಾ ಅಮೃತ ಮಹೋತ್ಸವ: ಭಾರತದ ಸ್ತ್ರೀರತ್ನಗಳು ಕೃತಿ ಲೋಕಾರ್ಪಣೆ


ಯುವ ಪೀಳಿಗೆಗೆ ಇತಿಹಾಸದ ಅರಿವು ಮೂಡಿಸಲು ಸ್ವಾತಂತ್ರ್ಯ ಸೇನಾನಿಗಳ ಕೃತಿಗಳು ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಗಾಂಧೀ ಭವನದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಕಾಶನ ವಿಭಾಗ ಆಯೋಜಿಸಿದ್ದ ಪುಸ್ತಕ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ‘ಭಾರತದ ಸ್ತ್ರೀ ರತ್ನಗಳು’ ಕೃತಿಯನ್ನು ಲೋಕಾರ್ಪಣೆ ಮಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಕಾಶನ ವಿಭಾಗ ಆಯೋಜಿಸಿರುವ “ಸ್ವಾತಂತ್ರ್ಯ ಸೇನಾನಿಗಳ’ ಕುರಿತ  ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನೂ ಅವರು ವೀಕ್ಷಿಸಿದರು.

ನಂತರ ಪ್ರಕಾಶನ ವಿಭಾಗದ “ಯೋಜನಾ’ ವಿಶೇಷ ಸಂಚಿಕೆಯಲ್ಲಿ ಪ್ರಕಟವಾಗಿರುವ ಕರ್ಣಾಟಕದ ಸ್ವಾತಂತ್ರ್ಯ ಸೇನಾನಿ ಮೈಲಾರ ಮಹದೇವ ಲೇಖನ ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಈ ವೇಳೆ ಯುವಜನತೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಇತಿಹಾಸದ ಬಗ್ಗೆ ಅರಿವು ಮೂಡಿಸಲು ಇಂತಹ ಕೃತಿಗಳು ಪ್ರೇರಣಾದಾಯಕ‌ವಾಗಿವೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾಪುರುಷರ  ಪರಿಚಯವನ್ನು ಯುವ ಪೀಳಿಗೆಗೆ ಮಾಡಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಗೋವಿಂದ ಕಾರಜೋಳ, ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಮಾಜಿ ಸಚಿವ ಎಚ್ ಕೆ ಪಾಟೀಲ್, ಗಾಂಧಿ ಭವನದ ಅಧ್ಯಕ್ಷ ವೂಡೆ ಪಿ ಕೃಷ್ಣ,  ಬೆಂಗಳೂರು ಪ್ರಕಾಶನ ವಿಭಾಗದ ನಿರ್ದೇಶಕ ಶ್ರೀ ದೇವೇಂದ್ರ ಮತ್ತಿತರರು ಉಪಸ್ಥಿತರಿದ್ದರು.


ಇದೇ ವೇಳೆ ಪುಸ್ತಕ ಪ್ರದರ್ಶನಕ್ಕೆ ಭೇಟಿ ನೀಡಿದ್ದ ಸುಮಂಗಲಿ ಸೇವಾ ಆಶ್ರಮದ  ಗಾಂಧಿ ಅನುಯಾಯಿ  ಸುಶೀಲಮ್ಮ ಅವರು ಗಾಂಧಿಜೀ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆಯನ್ನು ಸ್ಮರಿಸಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,