Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಡಿಕೇರಿ ನಗರಸಭೆಯ ಅಧ್ಯಕ್ಷರಾಗಿ ಬಿಜೆಪಿಯ ಅನಿತಾ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಸವಿತಾ ರಾಕೇಶ್ ಆಯ್ಕೆ

ಮಡಿಕೇರಿ ನಗರಸಭೆಯ ಅಧ್ಯಕ್ಷರಾಗಿ ಬಿಜೆಪಿಯ ಅನಿತಾ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಸವಿತಾ ರಾಕೇಶ್ ಆಯ್ಕೆ


ಮಡಿಕೇರಿ ನಗರಸಭೆಯ ಅಧ್ಯಕ್ಷರಾಗಿ ಬಿಜೆಪಿಯ ಅನಿತಾ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಸವಿತಾ ರಾಕೇಶ್ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಬಿಜೆಪಿಯ 16 ಸದಸ್ಯರು, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಕೈ ಎತ್ತುವ ಮೂಲಕ 19 ಮತಗಳಿಂದ ಅನಿತಾ ಹಾಗೂ ಸವಿತಾ ಅವರನ್ನು ಆಯ್ಕೆ ಮಾಡಿದರು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಅನಿತಾ ಪೂವಯ್ಯ ಹಾಗೂ ಎಸ್‌ಡಿಪಿಐಯ ಮೇರಿ ವೇಗಸ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸವಿತಾ ರಾಕೇಶ್ ಹಾಗೂ ಎಸ್‌ಡಿಪಿಐ ಯ ನೀಮಾ ಅರ್ಷದ್ ನಾಮಪತ್ರ ಸಲ್ಲಿಸಿದ್ದರು.
ನಗರಸಭೆಯಲ್ಲಿ ಬಿಜೆಪಿ 16, ಎಸ್‌ಡಿಪಿಐ 5, ಕಾಂಗ್ರೆಸ್ 1 ಹಾಗೂ ಜೆಡಿಎಸ್ 1 ಸದಸ್ಯ ಬಲವನ್ನು ಹೊಂದಿದ್ದು, ನಿರೀಕ್ಷೆಯಂತೆ ನಗರಸಭೆಯಲ್ಲಿ ಬಹುಮತ ಹೊಂದಿದ್ದ ಬಿಜೆಪಿಗೆ ಅಧಿಕಾರ ಲಭಿಸಿತು. ಅನಿತಾ ಪೂವಯ್ಯ ಅವರು ನಗರಸಭೆಗೆ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಕಳೆದ ಅವಧಿಯಲ್ಲಿ ಕಾಂಗ್ರೆಸ್ ನ ಕಾವೇರಮ್ಮ ಸೋಮಣ್ಣ ಹಾಗೂ ಅನಿತಾ ಸಮ ಬಲ ಸಾಧಿಸಿದ ಪರಿಣಾಮವಾಗಿ ಲಾಟರಿ ಮೂಲಕದ ಆಯ್ಕೆಯಲ್ಲಿ ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದರು. ಆದರೆ ಈ ಬಾರಿ ಬಿಜೆಪಿ ಸಂಪೂರ್ಣ ಬಹುಮತ ಹೊಂದಿರುವುದರಿಂದ ಮಡಿಕೇರಿಯ ಪ್ರಥಮ‌ ಪ್ರಜೆಯಾಗಿ ಅನಿತಾ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ಕಾರ್ಯ ನಿರ್ವಹಿಸಿದರು.

ಅಧ್ಯಕ್ಷ- ಉಪಾಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ನಗರಸಭೆಯ ಆವರಣದಲ್ಲಿ ಬಿಜೆಪಿ ಬೆಂಬಲಿಗರ ಜೈಕಾರ ಮುಗಿಲು ಮುಟ್ಟಿತ್ತು.ನೂತನ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಸವಿತಾ ರಾಕೇಶ್ ಅವರಿಗೆ ಅಭಿನಂದನೆಯ ಮಹಾಪೂರವೇ ಹರಿದುಬಂದಿತ್ತು.

ಮಡಿಕೇರಿ ನಗರಸಭೆಯಲ್ಲಿ 30 ತಿಂಗಳ ನಂತರ ಜನಪ್ರತಿನಿಧಿಗಳ ಹಾಗೂ ಏಳು ವರ್ಷಗಳ ಬಳಿಕ ಬಿಜೆಪಿ ಆಡಳಿತ ಪುನರಾರಂಭಗೊಂಡಂತಾಗಿದೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,