ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ
ಮಡಿಕೇರಿ ಅ.31: ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಭಾನುವಾರ ಜರುಗಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಅರೆಭಾμÉ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಿದರು.
ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊಂಬಾರನ ಜಿ.ಬೋಪಯ್ಯ, ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ನಗರಸಭೆ ಸದಸ್ಯರಾದ ಶ್ವೇತಾ, ಕಲಾವತಿ, ಕರ್ನಾಟಕ ಅರೆಭಾμÉ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾಮಿಶ್ರ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರ್ ಪುದಿಯ ನೆರವನ ಮಹೇಶ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸರ್ವೋದಯ ಸಮಿತಿ ಜಿಲ್ಲಾ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷರಾದ ಪೈಕೇರ ಮನೋಹರ್ ಮಾದಪ್ಪ, ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ನವೀನ್ ಅಂಬೆಕಲ್ಲು, ಪ್ರಮುಖರಾದ ಪೇರಿಯನ ಜಯಾನಂದ, ಕೂರನ ಪ್ರಕಾಶ್, ಗಪ್ಪು ಗಣಪತಿ, ದಮಯಂತಿ, ಗುಡ್ಡೆಮನೆ ರಮೇಶ್, ಕೊಡಗು, ಮೈಸೂರು ಮತ್ತು ಬೆಂಗಳೂರು ಗೌಡ ಸಮಾಜಗಳ ಪ್ರಮುಖರು, ಇತರರು ಸ್ವಾತಂತ್ರ್ಯ ವೀರ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡ ಅವರಿಗೆ ಗೌರವ ನಮನ ಸಲ್ಲಿಸಿದರು.
ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ದಂಬೇಕೋಡಿ ಆನಂದ, ಬೈತಡ್ಕ ಜಾನಕಿ ಬೆಳ್ಯಪ್ಪ, ಧನಂಜಯ ಅಗೋಳಿಕಜೆ, ಪ್ರೇಮ ರಾಘವಯ್ಯ ಚೊಕ್ಕಾಡಿ, ಪುರುಷೋತ್ತಮ ಕಿರ್ಲಾಯ, ಡಾ.ವಿಶ್ವನಾಥ ಬದಿಕಾನ, ಡಾ.ಕೆ.ಸಿ.ದಯಾನಂದ, ಜಯಪ್ರಕಾಶ್ ಮೊಂಟಡ್ಕ, ಎ.ಟಿ.ಕುಸುಮಾಧರ, ಕಿರಣ್ ಕುಂಬಳಚೇರಿ, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಚಿತ್ರ ಕಲಾವಿದರಾದ ಸತೀಶ್ ಇತರರು ಇದ್ದರು.
ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಕುರಿತು ಅಂಚೆ ಕಚೇರಿಯಿಂದ ಹೊರ ತಂದಿರುವ ಅಂಚೆ ಲಕೋಟೆಯನ್ನು ಗಣ್ಯರಿಗೆ ನೀಡಲಾಯಿತು.
ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಕುರಿತು ಲಿಟ್ಲ್ ಪ್ಲವರ್ ಶಾಲೆಯ ವಿದ್ಯಾರ್ಥಿಗಳು ನಮನಗೀತೆ ಹಾಡಿದರು. ಸಂಸ್ಮರಣಾ ಕಾರ್ಯಕ್ರಮದ ಆರಂಭದಲ್ಲಿ ಅಕಾಡೆಮಿ ಸದಸ್ಯರಾದ ಧನಂಜಯ ಅಗೋಳಿಕಜೆ ಅವರು ಸ್ವಾಗತಿಸಿ, ನಿರೂಪಿಸಿದರು,
ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ್ದ ನಗರದ ಕೋಟೆ ಆವರಣದ ಸ್ಥಳದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗುಡ್ಡೆಮನೆ ಕುಟುಂಬದವರು ಹಾಗೂ ಇತರರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಪ್ರೇಮ ರಾಘವಯ್ಯ ಚೊಕ್ಕಾಡಿ, ಪಾಂಡನ ಶಾರದ ನಾಗೇಶ್, ರುಕ್ಷ್ಮಿಣಿ ದುಗ್ಗಪ್ಪ ಅವರು ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಲಾವಣಿ ಪದ ಹಾಡಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network