Header Ads Widget

Responsive Advertisement

ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಿಸಿದ ಕೆ.ಜಿ.ಬೋಪಯ್ಯ

ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಿಸಿದ ಕೆ.ಜಿ.ಬೋಪಯ್ಯ 


ಮಡಿಕೇರಿ ಅ.08: ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 32 ಕುಟುಂಬಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಶುಕ್ರವಾರ ವಿತರಿಸಿದರು. 

 ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಪಾಜೆ, ಭಾಗಮಂಡಲ ಹೋಬಳಿಯ ಪೆರಾಜೆ, ಹಾಕತ್ತೂರು, ಚೆಂಬು, ಮದೆ, ಕೊಳಗದಾಳು, ಬೆಟ್ಟತ್ತೂರು, ಕೋರಂಗಾಲ, ಕಗ್ಗೋಡ್ಲು, ಬೇಂಗೂರು, ಕಾರುಗುಂದ, ತಾವೂರು ಮತ್ತಿತರ ಗ್ರಾಮಗಳ ಅರ್ಹರಿಗೆ ಸಾಗುವಳಿ ಚೀಟಿ ವಿತರಿಸಿದರು. 

 ಬಳಿಕ ಮಾತನಾಡಿದ ಕೆ.ಜಿ.ಬೋಪಯ್ಯ ಅವರು ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ಕುಟುಂಬಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಿಸಲಾಗಿದ್ದು, ಭೂಮಿಯನ್ನು ಯಾರು ಮಾರಿಕೊಳ್ಳಬಾರದು ಎಂದರು. 

ಸಾಗುವಳಿ ಚೀಟಿ ನೀಡಿದ ಭೂಮಿಯಲ್ಲಿ ಮನೆ ನಿರ್ಮಾಣ, ಕೃಷಿ ಚಟುವಟಿಕೆ ಕೈಗೊಳ್ಳಬಹುದಾಗಿದೆ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಹೇಳಿದರು.   

 ಮಡಿಕೇರಿ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ (ವಿರಾಜಪೇಟೆ ವಿಧಾನಸಭಾ ಕ್ಷೇತ್ರ) ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಹಲವು ದಶಕಗಳಿಂದ ಸಾಗುವಳಿ ಚೀಟಿ ಇಲ್ಲದೆ ಉಳುಮೆ ಮಾಡುತ್ತಿರುವ ಕುಟುಂಬಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. 

 ಹಲವು ವರ್ಷಗಳಿಂದ ಭೂಮಿಯನ್ನು ಅನುಭವಿಸಿಕೊಂಡು ಬರುತ್ತಿರುವವರಿಗೆ ತಮ್ಮ ‘ಹೆಸರಿನಲ್ಲಿ’ ಭೂಮಿ ಇಲ್ಲದೆ ಎಷ್ಟು ಸಂಕಷ್ಟ ಅನುಭವಿಸುತ್ತಾರೆ ಎಂಬುದನ್ನು ಅರಿತು ಶಾಸಕರಾದ ಕೆ.ಜಿ.ಬೋಪಯ್ಯ ಅವರ ಶ್ರಮದಿಂದ, ಕಂದಾಯ ಇಲಾಖೆ ಅಧಿಕಾರಿಗಳ ಪ್ರಾಮಾಣಿಕತೆ ಹಾಗೂ ಪಾರದರ್ಶಕ ಕಾರ್ಯದಿಂದ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ ಎಂದು ನಾಗೇಶ್ ಕುಂದಲ್ಪಾಡಿ ಅವರು ನುಡಿದರು. 

 ಬಹಳ ವರ್ಷಗಳ ಹಿಂದೆಯೇ ಹಕ್ಕು ಪತ್ರ ವಿತರಿಸಬೇಕಿತ್ತು, ಆದರೆ ಈಗಲಾದರೂ ದೊರೆಯುತ್ತಿದೆ ಎಂದು ಸಮಾದಾನ ತಂದಿದೆ ಎಂದು ಅವರು ಹೇಳಿದರು. 

 ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಕುಟುಂಬಗಳಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ ಎಂದು ಅವರು ವಿವರಿಸಿದರು.  

  ಹಲವು ಸಮಸ್ಯೆಗಳ ನಡುವೆಯೂ ಅರ್ಹರಿಗೆ ಹಕ್ಕು ಪತ್ರ ನೀಡಲು ಕಂದಾಯ ಇಲಾಖೆ ಶ್ರಮಿಸಿದೆ ಎಂದು ತಹಶೀಲ್ದಾರ್ ಅವರು ಹೇಳಿದರು.  

   ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಉಪಾಧ್ಯಾಯ, ತಾ.ಪಂ.ಮಾಜಿ ಸದಸ್ಯರಾದ ಅಪ್ರು ರವೀಂದ್ರ, ಶಿರಸ್ತೆದಾರರಾದ ಗುರುರಾಜ್, ದೇವರಾಜ್, ರಮೇಶ್ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,