ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವಿರುದ್ಧ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಟನೆ
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅತಿಥಿಗೃಹ ನಡೆಸಲು ಅನುಮತಿ ನೀಡದ ಚೆಟ್ಟಳ್ಳಿ ಪಂಚಾಯಿತಿ ವಿರುದ್ಧ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ನೇತೃತ್ವದಲ್ಲಿ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಪ್ರತಿಭಟನೆ ನಡೆಸಿದರು.
ಗ್ರಾ.ಪಂ ಕಚೇರಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಪ್ರಮುಖರು ಅತಿಥಿ ಗೃಹಕ್ಕೆ ಅನುಮತಿ ನೀಡದ ಗ್ರಾ.ಪಂ ಹಾಗೂ ತಡೆ ಒಡ್ಡುತ್ತಿರುವ ಕೆಲವು ಪಂಚಾಯಿತಿ ಸದಸ್ಯರ ವಿರುದ್ಧ ದಿಕ್ಕಾರ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಂದೀಶ್‌ಕುಮಾರ್ ಮಾತನಾಡಿ ಕೆಲವೊಂದು ಗೊಂದಲಗಳಿಂದ ಅನುಮತಿ ನೀಡಲಾಗಿಲ್ಲ. ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅನುಮತಿ ನೀಡುತ್ತೇವೆ ಎಂದು ಭರವಸೆ ನೀಡಿದರು. ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಗ್ರಾ.ಪಂ ಸದಸ್ಯ ಕಂಠಿ ಕಾರ್ಯಪ್ಪ ಮಾತನಾಡಿ ನಾವು ಪ್ರತಿಭಟನೆ ನಡೆಸುವ ವಿಚಾರ ತಿಳಿದಿದ್ದರೂ ಪಂಚಾಯಿತಿ ಅಧ್ಯಕ್ಷರು ಗೈರು ಹಾಜರಾಗಿದ್ದಾರೆ. ಈ ಹಿಂದೆ ಗ್ರಾ.ಪಂ ಸಭೆಯಲ್ಲಿ ಮಾತಿನ ಚಕಮಕಿ ನಡೆಯಿತು ಎನ್ನುವ ಕಾರಣಕ್ಕೆ ಅಧ್ಯಕ್ಷರೇ ಸಭಾತ್ಯಾಗ ಮಾಡಿದ ಪ್ರಸಂಗ ನಡೆದಿತ್ತು. ಈ ರೀತಿಯ ಬೆಳವಣಿಗೆಗಳು ನಡೆದರೆ ಪಂಚಾಯಿತಿಯಲ್ಲಿ ನಾವು ಇರುವುದಾದರು ಹೇಗೆ ಎಂದು ಪ್ರಶ್ನಿಸಿದರು.
ಗ್ರಾ.ಪಂ ಸದಸ್ಯೆ ಮಾಲಾಶ್ರೀ, ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು ಪೂವಯ್ಯ, ನಿರ್ದೇಶಕರಾದ ಮರದಾಳು ಎಸ್.ಉಲ್ಲಾಸ, ಪೇರಿಯನ ಪೂರ್ಣಚ್ಚ, ಬಿ.ಎಂ.ಕಾಶಿ, ಬಟ್ಟೀರ ಕೆ.ಅಪ್ಪಣ್ಣ, ಪುತ್ತರಿರ ಪಿ.ನಂಜಪ್ಪ, ಟಿ.ಎಸ್.ಧನಂಜಯ, ಸಹಕಾರ ಸಂಘದ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network