Header Ads Widget

ಸರ್ಚ್ ಕೂರ್ಗ್ ಮೀಡಿಯ

ಧನ್ವಂತರಿ ಜಯಂತಿ ಮತ್ತು 6 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಧನ್ವಂತರಿ ಜಯಂತಿ ಮತ್ತು 6 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ


ಮಡಿಕೇರಿ: ಕೊಡಗು ಜಿಲ್ಲಾ ಆಯುಷ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಗು ಜಿಲ್ಲೆ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಮಹದೇವಪೇಟೆಯ ಜಿಲ್ಲಾ ಆಯುಷ್ ಕಚೇರಿ ಸಭಾಂಗಣದಲ್ಲಿ ಧನ್ವಂತರಿ ಜಯಂತಿ ಮತ್ತು 6 ನೇ ಆಯುರ್ವೇದ ದಿನಾಚರಣೆ “ಆಯುರ್ವೇದದಿಂದ ಪೋಷಣೆ” ದೊಂದಿಗೆ ಜರುಗಿತು. 

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ತಮ್ಮ ಸುತ್ತ ಮುತ್ತಲ ಪರಿಸರವನ್ನು ಶುಚಿಯಾಗಿಡಬೇಕು. ಕಸದಿಂದ ಗೊಬ್ಬರ ಮಾಡಿ ಔಷಧ ಗಿಡಗಳ ನಿರ್ವಹಣೆ. ಹಸಿಕಸವನ್ನು ಗೊಬ್ಬರವಾಗಿಸಿ ತಮ್ಮ ಸುತ್ತ ಮುತ್ತಲ ಪರಿಸರದಲ್ಲಿ ಆಯುರ್ವೇದ ಸಸ್ಯಗಳನ್ನು ಬೆಳೆಸಬೇಕು. ಜೊತೆಗೆ ಆಯುಷ್ ಪದ್ಧತಿಯ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು. 

ತಜ್ಞವೈದ್ಯರಾದ ಡಾ.ಪಲ್ಲವಿ ನಾಯಕ.ಟಿ.ಎನ್ ಅವರು ಆಯುರ್ವೇದದಿಂದ ಪೋಷಣೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಉಪನ್ಯಾಸ ನೀಡಿದರು. 

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಯುಷ್ ವೈದ್ಯಾಧಿಕಾರಿಗಳಾದ ಡಾ.ಶೈಲಜಾ.ಜಿ, ಡಾ. ಅರುಣ್ ಅಸೂಟಿ, ಡಾ. ವಿನ್ಯಾಸ, ಡಾ. ಸೌಪರ್ಣಿಕ, ಡಾ. ಶ್ವೇತಾ.ಕೆ.ಎಸ್. ಮತ್ತು ಆಯುಷ್ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು. 

ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಡಾ.ಶುಭಾ.ಕೆ.ಜಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಡಾ.ರವಿಕುಮಾರ್ ಅವರು ಸ್ವಾಗತಿಸಿದರು. ಕೊಡಗು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಶ್ರೀನಿವಾಸ. ಎಂ.ಬಿ ಪ್ರಾಸ್ತಾವಿಕ ಭಾಷಣ ಮಾಡಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,