ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ರಜತ ಮಹೋತ್ಸವ ಪ್ರಯುಕ್ತ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ಕಾರ್ಯಕ್ರಮ: ಸುಬ್ರಮಣ್ಯ
ಮಡಿಕೇರಿ ನ.11: ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಆಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಅಮೃತ ಮಹೋತ್ಸವ’ ಆಚರಿಸಲಾಗುತ್ತಿದೆ. ಮತ್ತೊಂದೆಡೆ ಕಾನೂನು ಸೇವೆಗಳ ಕಾಯ್ದೆಯ ಪ್ರಕಾರ ಕಾನೂನು ಸೇವಾ ಪ್ರಾಧಿಕಾರಗಳು ಸ್ಥಾಪನೆಗೊಂಡು 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ರಜತ ಮಹೋತ್ಸವವನ್ನು ಆಚರಿಸಲಾಗುತ್ತಿದೆ.
ಈ ಎರಡು ಸುಸಂದರ್ಭಗಳ ಪ್ರಯುಕ್ತ ‘ಪಾನ್ ಇಂಡಿಯಾ ಎವರ್‍ನೆಸ್ ಅಂಡ್ ಔಟ್‍ರೀಚ್ ಕಂಪೈನ್ (Pan India Awareness and outreach Campaign) ಎಂಬ ಶಿರ್ಷೀಕೆ ಅಡಿಯಲ್ಲಿ ಪ್ರತಿಯೊಂದು ಹಳ್ಳಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಪ್ರತಿ ನಾಗರಿಕನಿಗೆ ಕಾನೂನು ಅರಿವು ಮೂಡಿಸಲು ಮತ್ತು ಸರ್ಕಾರಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಉಂಟುಮಾಡುವಂತೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್ಲಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಿದೆ.
ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಪ್ರತಿ ಹಳ್ಳಿಯಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಡಿಸೆಂಬರ್, 14 ರವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಸೇವಾ ಸಮಿತಿಗಳ ಮೂಲಕ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಮಾಹಿತಿ ನೀಡಿದ್ದಾರೆ.
ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡುವುದು, ಉಚಿತ ಕಾನೂನಿನ ನೆರವು ಮತ್ತು ಸಲಹೆ ನೀಡುವುದು ಹಾಗೂ ಲೋಕ್ ಅದಾಲತ್‍ಗಳ ಮೂಲಕ ನ್ಯಾಯಾಲಯಗಳಲ್ಲಿ ಅಥವಾ ಇತರೆ ಕಚೇರಿಗಳಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾ£ದಿಂದ ಇತ್ಯರ್ಥಗೊಳಿಸುವುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಸೇವಾ ಸಮಿತಿಗಳ ಉದ್ದೇಶವಾಗಿರುತ್ತದೆ ಎಂದು ಎನ್.ಸುಬ್ರಮಣ್ಯ ಅವರು ಹೇಳಿದ್ದಾರೆ.
1987ರ ಕಾನೂನು ಸೇವೆಗಳ ಪ್ರಾಧಿಕಾರದ ಕಲಂ 12 ರ ಪ್ರಕಾರ, ಉಚಿತ ಕಾನೂನಿನ ನೆರವು ಮತ್ತು ಸಲಹೆಯನ್ನು ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ, ಮಹಿಳೆ ಮತ್ತು ಮಕ್ಕಳಿಗೆ, ಮಾನವ ಕಳ್ಳ ಸಾಗಾಣಿಕೆ ಅಥವಾ ಭಿಕ್ಷಾಟನೆಗೆ ಗುರಿಯಾದವರಿಗೆ, ವಿಶೇಷ ಚೇತನ ಮತ್ತು ಇತರೆ ನ್ಯೂನ್ಯತೆಗಳನ್ನು ಹೊಂದಿದವರಿಗೆ, ನೈಸರ್ಗಿಕ ವಿಕೋಪಗಳಿಗೆ ತುತ್ತಾದವರಿಗೆ, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ, ಮತೀಯ ಕಾರಣದಿಂದ ದೌರ್ಜನ್ಯಕ್ಕೆ ಒಳಗಾದವರಿಗೆ, ರಕ್ಷಣಾ ಗೃಹ ಅಥವಾ ಮನೊರೋಗಿಗಳ ಆಸ್ಪತ್ರೆ ಮುಂತಾದವುಗಳಲ್ಲಿ ಅಭಿರಕ್ಷೆ ಪಡೆಯುತ್ತಿರುವವರಿಗೆ, ಗುಂಪು ಘರ್ಷಣೆಗೆ ತುತ್ತಾದವರಿಗೆ, ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರುವ ಎಲ್ಲಾ ವರ್ಗ ಮತ್ತು ಜಾತಿಯ ಜನರಿಗೆ ಹಾಗೂ ಚಾಲ್ತಿಯಲ್ಲಿರುವ ಯಾವುದೇ ಕಾನೂನು ಅಡಿಯಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಲೋಕ ಅದಾಲತ್‍ಗಳ ಮೂಲಕ ಕೆಲವು ಪ್ರಕರಣಗಳನ್ನು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಾರ್ವಜನಿಕರು ಹಾಗೂ ಇತರೆ ಸಂಘ ಸಂಸ್ಥೆಗಳು ಉಚಿತವಾಗಿ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದರು.
ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು ಯುಎಸ್ 138. ಆರ್ಥಿಕ ವಸೂಲಾತಿ ಪ್ರಕರಣಗಳು. ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು. ಮೈನ್‍ಟೆನೆನ್ಸ್ ಪ್ರಕರಣಗಳು ಮತ್ತಿತರ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು) ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು ಚೆಕ್ಕು ಅಮಾನ್ಯದ ಪ್ರಕರಣಗಳು u/ 138, ಆರ್ಥಿಕ ವಸೂಲಾತಿ ಪ್ರಕರಣಗಳು ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ) ಸಿವಿಲ್ ಪ್ರಕರಣಗಳು (ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆಗಳು).
ಈ ಎಲ್ಲಾ ಸಾರ್ವಜನಿಕರು ಉಚಿತ ಕಾನೂನು ನೆರವು ಮತ್ತು ಸಲಹೆಯ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಡಿಕೇರಿ ಅಥವಾ ತಾಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ಮತ್ತು ಸೋಮವಾರಪೇಟೆ ಮತ್ತು ಸಹಾಯವಾಣಿ ಸಂಖ್ಯೆ 08272-222373 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ತಿಳಿಸಿದ್ದಾರೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network