Header Ads Widget

ಸರ್ಚ್ ಕೂರ್ಗ್ ಮೀಡಿಯ

‘ರಾಷ್ಟ್ರೀಯ ಐಕ್ಯತಾ ಸಪ್ತಾಹ’ ಪ್ರಮಾಣ ವಚನ ಸ್ವೀಕಾರ

‘ರಾಷ್ಟ್ರೀಯ ಐಕ್ಯತಾ ಸಪ್ತಾಹ’ ಪ್ರಮಾಣ ವಚನ ಸ್ವೀಕಾರ


ಮಡಿಕೇರಿ ನ.19: ‘ರಾಷ್ಟ್ರೀಯ ಐಕ್ಯತಾ ಸಪ್ತಾಹದ’ ಪ್ರಮಾಣ ವಚನವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬೋಧಿಸಿದರು.  

ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆ ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆಂದು ಶ್ರದ್ಧಾಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ. ಅಲ್ಲದೆ ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದುಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಲಾಯಿತು. 

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಜಿಲ್ಲಾ ನೋಂದಣಾಧಿಕಾರಿ ಸಿದ್ದರಾಜು, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತಾಲ್ಲೂಕು ಅಧಿಕಾರಿ ಎಂ.ಎಂ.ಯತ್ನಟ್ಟಿ, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್ ಹಲವು ಇಲಾಖೆ ಅಧಿಕಾರಿಗಳು ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,