Header Ads Widget

ಸರ್ಚ್ ಕೂರ್ಗ್ ಮೀಡಿಯ

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಡಿಸಿ ಸೂಚನೆ

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಡಿಸಿ ಸೂಚನೆ


ಮಡಿಕೇರಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ವಾರ್ಷಿಕ ವೇಳಾ ಪಟ್ಟಿಯಂತೆ ಉಪನ್ಯಾಸ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2021 ರ ಸೆಪ್ಟೆಂಬರ್‍ನಿಂದ 2022 ರ ಫೆಬ್ರವರಿ ವರೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಕಾರ್ಯಕ್ರಮದ ವೇಳಾಪಟ್ಟಿಯಂತೆ ಉಪನ್ಯಾಸ ನಡೆಸುವ ಬಗ್ಗೆ ಚರ್ಚಿಸಲಾಯಿತು. 

ಸಮುದಾಯ ಪೊಲೀಸ್‍ನಲ್ಲಿ ವಿದ್ಯಾರ್ಥಿಗಳ ಪಾತ್ರ ಬಗ್ಗೆ ಮಾಹಿತಿ ನೀಡುವುದು, ಸ್ವಚ್ಛ ಹಾಗೂ ಹಸಿರು ಶಾಲೆ, ರಸ್ತೆ ಸುರಕ್ಷತೆ, ಟ್ರಾಪಿಕ್ ಬಗ್ಗೆ ಅರಿವು, ಅಪಘಾತಕ್ಕೆ ಕಾರಣಗಳು, ಅಪಘಾತ ತಡೆಯುವುದು, ಪ್ರಥಮ ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡುವುದು, ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವ ಬಗ್ಗೆ ಉಪನ್ಯಾಸ, ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡುವುದು, ಗುಂಪು ಚರ್ಚೆ ಮಾಡುವುದು, ಮಹಿಳೆಯರ ಸುರಕ್ಷತೆ ಮತ್ತು ಮಕ್ಕಳ ರಕ್ಷಣೆ ಹಾಗೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡುವುದು. ಪ್ರಾಕೃತಿಕ ವಿಕೋಪ ನಿರ್ವಹಣೆ, ಹೀಗೆ ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಸ್ಟೂಡೆಂಟ್ ಪೊಲೀಸ್ ಕೆಡೆಟ್ ಉದ್ದೇಶವಾಗಿದೆ ಎಂದು ಕಮಾಂಡೆಂಟ್ ಹಾಗೂ ನೋಡಲ್ ಅಧಿಕಾರಿ ಬಿ.ಡಿ.ಲೋಕೇಶ್ ಅವರು ಮಾಹಿತಿ ನೀಡಿದರು. 

ನಗರದ  ಸರ್ಕಾರಿ ಪದವಿ ಪೂರ್ವ ಕಾಲೇಜು, ಗಾಳಿಬೀಡು ಬಳಿಯ ಜವಾಹರ್ ನವೋದಯ ವಿದ್ಯಾಲಯ, ನಗರದ ಕೇಂದ್ರಿಯ ವಿದ್ಯಾಲಯ, ಕುಶಾಲನಗರ, ಪೊನ್ನಂಪೇಟೆ, ವಿರಾಜಪೇಟೆ, ಶಿರಂಗಾಲ ಮತ್ತು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನಾ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ, ಸಹಾಯಕ ಕಮಾಂಡೆಂಟ್ ಹರೀಶ್, ಜಿಲ್ಲಾ ನೋಡಲ್ ಅಧಿಕಾರಿ ಮಹಂತೇಶ್, ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,