ರೈತರ ಮಕ್ಕಳಿಗೆ ವಿದ್ಯಾನಿಧಿ ಶಿಷ್ಯ ವೇತನ
ಎಸ್‍ಎಸ್‍ಎಲ್‍ಸಿ ಅಥವಾ 10 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಅರ್ಹ ಮಕ್ಕಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಜಿಟಿ) ಪದ್ದತಿಯ ಮೂಲಕ 2021-22 ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ವಾರ್ಷಿಕ ಶಿಷ್ಯ ವೇತನ ರೂಪದಲ್ಲಿ ಒದಗಿಸಲಾಗುವುದು.
“ಮುಖ್ಯ ಮಂತ್ರಿ ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ನೀಡಲಾಗುವ ವಾರ್ಷಿಕ ಶಿಷ್ಯ ವೇತನದ ವಿವರ:-ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲಮಾ ಹುಡುಗರಿಗೆ ರೂ.2500, ಹುಡುಗಿಯರಿಗೆ/ಅನ್ಯ ಲಿಂಗದವರು, ರೂ.3 ಸಾವಿರ, ಬಿ.ಎ, ಬಿ.ಎಸ್.ಸಿ, ಬಿ.ಕಾಂ ಇನ್ನಿತರೆ ಪದವಿ ಕೋರ್ಸ್ ಗಳು ಹುಡುಗರಿಗೆ ರೂ. 5 ಸಾವಿರ, ಹುಡುಗಿಯರಿಗೆ/ಅನ್ಯ ಲಿಂಗದವರು ರೂ.5500, ಎಲ್‍ಎಲ್‍ಬಿ, ಪ್ಯಾರಮೆಡಿಕಲ್, ಬಿ.ಫಾರ್ಮ್, ನಸಿರ್ಂಗ್ ಇನ್ನಿತರೆ ವೃತ್ತಿಪರ ಕೋರ್ಸ್ ಗಳು ಹುಡುಗರಿಗೆ ರೂ.7500, ಹುಡುಗಿಯರಿಗೆ/ ಅನ್ಯ ಲಿಂಗದವರಿಗೆ ರೂ.8 ಸಾವಿರ, ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಎಲ್ಲ ಸ್ನಾತಕೋತ್ತರ ಕೋರ್ಸ್‍ಗಳು ಹುಡುಗರಿಗೆ ರೂ.10 ಸಾವಿರ, ಹುಡುಗಿಯರಿಗೆ/ ಅನ್ಯ ಲಿಂಗದವರಿಗೆ ರೂ.11 ಸಾವಿರ
ವಿದ್ಯಾರ್ಥಿಯು ರೈತರ ಮಕ್ಕಳಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿಯು ರೈತರ ಗುರುತಿನ ಸಂಖ್ಯೆ ಹೊಂದಿರಬೇಕು. ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೆÇೀಷಕ, ಪೆÇೀಷಕರು ಇಲ್ಲದೇ ಇದ್ದ ಸಂದರ್ಭದಲ್ಲಿ ಉಳುಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನಿನನ್ನು ಅವರು ಹೊಂದಿರಬೇಕು.
ಈ ರೈತರ ಮಕ್ಕಳು ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯ ವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ, ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ್ಯಾಂಕ್ ಮತ್ತಿತರ ಆಧಾರದ ಮೇಲೆ ಪಡೆಯುವ ಶಿಷ್ಯ ವೇತನ, ಪ್ರಶಸ್ತಿ, ಪ್ರತಿಫಲ ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ಶಿಷ್ಯ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ರೈತರ ಮಕ್ಕಳ ತಂದೆ-ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ, ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಈ ಶಿಷ್ಯ ವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್/ ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತಕ್ಕದ್ದು. ಕೋರ್ಸ್‍ನ ಸೆಮಿಸ್ಟರ್/ಶೇಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾರೆ (ಪುನ: ಪರೀಕ್ಷೆ ತೆಗೆದುಕೊಂಡರೆ )ವಿದ್ಯಾರ್ಥಿಗಳು ಶಿಷ್ಯವೇತನ ವನ್ನು ಪಡೆಯಲು ಅರ್ಹರಾಗಿರುವುದಿಲ್ಲ. ಈ ಶಿಷ್ಯ ವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‍ಗೆ ನೀಡಲಾಗುವುದು.
ಈ ಶಿಷ್ಯವೇತನವನ್ನು ಕರ್ನಾಟಕ ರಾಜ್ಯದ ಎಲ್ಲಾ ವರ್ಗದ ರೈತರ ಮಕ್ಕಳು ರಾಜ್ಯದ ಇತರೆ ಯಾವುದೇ ( ಎಸ್ಸಿ, ಎಸ್ಟಿ.ಓಬಿಸಿ, ಮೈನಾರಿಟಿ) ಶಿಷ್ಯ ವೇತನವನ್ನು ಪಡೆಯಲು ಆಗದಿದ್ದಲ್ಲಿ, ರೈತರ ಮಕ್ಕಳ ಶಿಷ್ಯ ವೇತನಕ್ಕೆ http://ssp.postmateric.karnataka.gov.in ಪೆÇೀರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಸಲ್ಲಿಸಬಹುದು. ಅಲ್ಲದೆ, ವಿದ್ಯಾರ್ಥಿಗಳು ತೆರೆದ ಬ್ಯಾಂಕ್ ಖಾತೆಗಳನ್ನು ಕಡ್ಡಾಯವಾಗಿ ಆಧಾರ್ ಜೋಡನೆ ಮಾಡಿಸುವುದರೊಂದಿಗೆ ಎನ್‍ಪಿಸಿಐ ಲಿಂಕ್ ಕೂಡ ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network