Header Ads Widget

ಸರ್ಚ್ ಕೂರ್ಗ್ ಮೀಡಿಯ

ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ

ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ


ಮಡಿಕೇರಿ ನ.19: ಮೈಸೂರು ಆಡಳಿತ ತರಬೇತಿ ಸಂಸ್ಥೆ ವತಿಯಿಂದ ದಾವಣಗೆರೆ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ತರಬೇತಿ ನಡೆಯಿತು. 

   ಭೂಕುಸಿತ, ಪ್ರವಾಹ  ಪ್ರದೇಶಗಳನ್ನು ಭೇಟಿ ಮಾಡಿ ಪ್ರಶಿಕ್ಷಣಾರ್ಥಿಗಳು ಮಾಹಿತಿ ಪಡೆದರು. ಈ ವೇಳೆ ಮಡಿಕೇರಿ, ಸೋಮವಾರಪೇಟೆ ತಾಲ್ಲೂಕುಗಳ ಭೂಕುಸಿತ ಪ್ರದೇಶಗಳು ಹಾಗೂ ಕುಶಾಲನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರು ಪ್ರಶಿಕ್ಷಣಾರ್ಥಿಗಳಿಗೆ  ಭೂಕುಸಿತ, ಪ್ರವಾಹ, ವಿಪತ್ತು ನಿರ್ವಹಣೆ, ಘಟನಾ ಪ್ರತಿಕ್ರಿಯೆ ವ್ಯವಸ್ಥೆಯ ಬಗ್ಗೆ ತರಬೇತಿ ನೀಡಿದರು. 

      ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ರಾಹುಲ್.ಎಂ.ಎಸ್ ಅವರು ಕೊಡಗಿನ ಭೂವೈಜ್ಞಾನಿಕ ವ್ಯವಸ್ಥೆ, ನೋಡಲ್ ಅಧಿಕಾರಿಯ ಕರ್ತವ್ಯ ಹಾಗೂ ವಿಪತ್ತು ನಿರ್ವಹಣೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,