Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಂವಿಧಾನ ದಿನಾಚರಣೆ; ಪ್ರತಿಜ್ಞಾ ವಿಧಿ ಸ್ವೀಕಾರ

ಸಂವಿಧಾನ ದಿನಾಚರಣೆ; ಪ್ರತಿಜ್ಞಾ ವಿಧಿ ಸ್ವೀಕಾರ


ಮಡಿಕೇರಿ ನ.26: ಭಾರತದ ಸಂವಿಧಾನ ದಿನ ಪ್ರಯುಕ್ತ ಶುಕ್ರವಾರ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ  ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. 

ಭಾರತ ದೇಶದ ಪ್ರಜೆಗಳಾದ ನಾವು, ಭಾರತವನ್ನು ಸಾರ್ರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಬದ್ಧರಾಗಿರಬೇಕು ಎಂದರು. 

ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಸಮಾನತೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಎಂದರು. 

ವ್ಯಕ್ತಿ ಗೌರವ, ರಾಷ್ಟ್ರದ ಏಕತೆ, ಹಾಗೂ ಅಖಂಡತೆಯನ್ನು ಕಾಪಾಡುವುದು. ಭ್ರಾತೃತ್ವ ಭಾವನೆ ವೃದ್ಧಿಗೊಳಿಸಲು ಸಂಕಲ್ಪ ಮಾಡುವಂತಾಗಬೇಕು ಎಂದು ಅವರು ಬೋಧಿಸಿದರು.  

1949ರ ನವೆಂಬರ್, 26 ರಂದು ಸಂವಿಧಾನವನ್ನು ಅರ್ಪಿಸಿಕೊಂಡಿದ್ದೇವೆ ಎಂದು ಪ್ರತಿಜ್ಞಾ ವಿದಿ ಜಿಲ್ಲಾಧಿಕಾರಿ ಅವರು ಬೋಧಿಸಿದರು. 

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಗೌರವ್ ಕುಮಾರ್ ಅವರು ಸಂವಿಧಾನ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಜಿಲ್ಲಾ ನೊಂದಣಾಧಿಕಾರಿ ಸಿದ್ದೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,