Header Ads Widget

Responsive Advertisement

ಡಿಸೆಂಬರ್, 28, 2021

ಡಿಸೆಂಬರ್, 28, 2021

ಜಂಬೂರು; ವರ್ಚುವಲ್ ಮೂಲಕ ಮುಖ್ಯಮಂತ್ರಿ ಅವರಿಂದ ಮನೆ ಉದ್ಘಾಟನೆ 


ಮಡಿಕೇರಿ ಡಿ.೨೮ ಕೊಡಗು ಜಿಲ್ಲೆಯ ಮಾದಾಪುರ ಬಳಿ ಜಂಬೂರಿನಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಲಾಗಿರುವ ೧೦೬ ಮನೆಗಳನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.     

ವರ್ಚುವಲ್ ಸಭೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಇನ್ಫೋಸಿಸ್ ಪ್ರತಿಷ್ಠಾನದ ಪ್ರಮುಖರು ಇತರರು ಪಾಲ್ಗೊಂಡಿದ್ದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ಮುಂದಾಗಿ, ವಸತಿ ಕಲ್ಪಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.   

ಸರ್ಕಾರದ ಜೊತೆ ಇನ್ಫೋಸಿಸ್ ಪ್ರತಿಷ್ಠಾನವು ಕೈಜೋಡಿಸಿರುವುದು ಮಾದರಿ ಕೆಲಸವಾಗಿದೆ. ಪ್ರವಾಹದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಡುತ್ತಿರುವುದು, ಸಂತ್ರಸ್ತ ಕುಟುಂಬಗಳಿಗೆ ಆಶಾದಾಯಕವಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು. 

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ಕುಟುಂಬ, ಶಾಲೆ, ಊರು ಯಾವುದನ್ನು ಪ್ರತಿಷ್ಠಾನದ ಅಧ್ಯಕ್ಷರು ಮರೆತಿಲ್ಲ ಎಂದು ಮುಖ್ಯಮಂತ್ರಿ ಅವರು ಶ್ಲಾಘಿಸಿದರು.  

ತಮ್ಮ ಸಮಾಜಮುಖಿ ಕೆಲಸಗಳು ಮುಂದಿನ ಜನಾಂಗಕ್ಕೆ ಮಾದರಿಯಾಗುವುದರ ಜೊತೆಗೆ ಮತ್ತೊಬ್ಬರಿಗೆ ಪ್ರೇರಣಾ ಶಕ್ತಿಯಾಗಿದೆ. ಸರ್ಕಾರದ ಜೊತೆ ಕೈಜೋಡಿಸಿ,ರುವುದು ತಮ್ಮ ಹೃದಯ ವೈಶಾಲ್ಯತೆಗೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಅವರು ಗುಣಗಾನ ಮಾಡಿದರು. 

ಸಭೆಯ ಆರಂಭದಲ್ಲಿ ಮಾತನಾಡಿದ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ ಅವರು ಕೊಡಗು ಜಿಲ್ಲೆಯ ಜಂಬೂರಿನಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ೨೦೦ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇದರಲ್ಲಿ ಪೂರ್ಣಗೊಂಡಿರುವ ೧೦೬ ಮನೆಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮನೆ ನಿರ್ಮಿಸಲಾಗಿದೆ ಎಂದರು.      

ಇನ್ಫೋಸಿಸ್ ಪ್ರತಿಷ್ಠಾನವು ‘ಬಹುಜನ ಹಿತಾಯ, ಬಹುಜನ ಸುಖಾಯ; ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸುಧಾಮೂರ್ತಿ ಅವರು ಹೇಳಿದರು.  

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾದಪುರ ಬಳಿ ಜಂಬೂರಿನಲ್ಲಿ ಇನ್ಫೋಸಿಸ್ ಪ್ರತಿಷ್ಠಾನದಿಂದ ನಿರ್ಮಿಸಲಾಗುತ್ತಿರುವ ೨೦೦ ಮನೆಗಳಲ್ಲಿ ೧೦೬  ಮನೆಗಳು ಪೂರ್ಣಗೊಂಡಿದ್ದು ಉದ್ಘಾಟನೆಯಾಗುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. 

ಜಂಬೂರಿನಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಬಡಾವಣೆಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯವನ್ನು ಕೂಡಲೇ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮತದಾರರ ಪಟ್ಟಿ; ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ: ಅನ್ಬುಕುಮಾರ್

ಮಡಿಕೇರಿ ಡಿ.೨೮ :-ಜನವರಿ ೧, ೨೦೨೨ ಅರ್ಹತಾ ದಿನಾಂಕದAತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳುವಂತೆ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬು ಕುಮಾರ್ ಅವರು ಸೂಚಿಸಿದ್ದಾರೆ. 

 ಕೊಡಗು ಜಿಲ್ಲೆಗೆ ಮತದಾರರ ಪಟ್ಟಿ ಸಂಬAಧಿಸಿದAತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಹಶೀಲ್ದಾರರು ನಮೂನೆ-೬,೭,೮ ಮತ್ತು ೮ ಎ ಗಳನ್ನು ನಿಯಮಾನುಸಾರ ಇತ್ಯರ್ಥಗೊಳಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. 

ಮತದಾನದ ಹಕ್ಕು ಸಾಂವಿಧಾನಿಕ ಹಕ್ಕು ಆಗಿದ್ದು, ೧೮ ವರ್ಷ ಮೀರಿದ ಭಾರತೀಯ ಪ್ರಜೆಗೆ ಈ ಮತದಾನ ಹಕ್ಕನ್ನು ಒಗದಿಸುವುದು ಮತದಾರರ ನೋಂದಣಾಧಿಕಾರಿಗಳ ಕರ್ತವ್ಯವಾಗಿದೆ ಎಂದು ಮತದಾರರ ಪಟ್ಟಿ ವೀಕ್ಷಕರು ತಿಳಿಸಿದರು. 

 ಕ್ಲೇಮು ಮತ್ತು ಆಕ್ಷೇಪಣೆ ಸ್ವೀಕರಿಸುವ ಅವಧಿಯಲ್ಲಿ ಮತಗಟ್ಟೆವಾರು ಸ್ವೀಕೃತವಾಗಿರುವ ಒಟ್ಟು ನಮೂನೆ, ಅಂಗೀಕಾರ ಮತ್ತು ತಿರಸ್ಕೃತ ಅಂಕಿ ಅಂಶಗಳ ವಿವರವನ್ನು ನೀಡುವುದು. ಬೂತ್ ಮಟ್ಟದ ಅಧಿಕಾರಿಗಳು ನಮೂನೆಗಳನ್ನು ತಾಲ್ಲೂಕು ಕಚೇರಿಗೆ ನೀಡಿದ್ದು, ತಾಲ್ಲೂಕು ಕಚೇರಿಯಲ್ಲಿ ಡಾಟಾ ಎಂಟ್ರಿ ಮಾಡದೇ ಬಾಕಿ ಇರುವ ಅರ್ಜಿಗಳ ಮತಗಟ್ಟೆವಾರು ವಿವರ ನೀಡುವುದು. ಮತದಾರರ ಪಟ್ಟಿಗೆ ಸಂಬAಧಿಸಿದAತೆ ಹೆಸರು ಸೇರ್ಪಡೆಗೆ ಸಲ್ಲಿಸಲಾದ ನಮೂನೆ-೬ನ್ನು ತಿರಸ್ಕರಿಸಿದ್ದಲ್ಲಿ, ಮತದಾರರ ನೋಂದಣಾಧಿಕಾರಿ ಅವರ ಆದೇಶದ ವಿರುದ್ಧ ಮತದಾರರು ಮೇಲ್ಮನವಿ ಸಲ್ಲಿಸಲು ನಿಯಮಗಳಲ್ಲಿ ಅವಕಾಶ ಇರುವುದರಿಂದ ತಿರಸ್ಕರಿಸಿದ ಎಲ್ಲಾ ನಮೂನೆಗಳಿಗೆ ಸಂಬAಧಿಸಿದAತೆ ಸಂಬAಧಪಟ್ಟ ಅರ್ಜಿದಾರರಿಗೆ ರಿಜಿಸ್ಟರ್ ಪೋಸ್ಟ್ (ಆರ್‌ಪಿಎಡಿ) ಮೂಲಕ ಮಾಹಿತಿ ನೀಡುವಂತೆ ವಿ.ಅನ್ಬುಕುಮಾರ್ ಅವರು ಹೇಳಿದರು.  

ವಯಸ್ಸಿನ ಬಗ್ಗೆ ಮತ್ತು ವಿಳಾಸದ ಬಗ್ಗೆ ದಾಖಲೆಗಳನ್ನು ಪಡೆದು ಸೇರ್ಪಡೆ ಮಾಡುವುದು. ಯಾವುದೇ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಬಾರದು. ನಮೂನೆಗಳಲ್ಲಿ ಯಾವುದೇ ದಾಖಲೆಗಳ/ ಮಾಹಿತಿ ಕೊರತೆ ಇದ್ದಲ್ಲಿ ಸಂಬAಧಪಟ್ಟ ಅರ್ಜಿದಾರರನ್ನು ಸಂಪರ್ಕಿಸಿ, ದಾಖಲೆಗಳನ್ನು ಪಡೆದು ಸೇರ್ಪಡೆ ಮಾಡುವುದು. ಪ್ರತಿ ಅರ್ಜಿಗಳಿಗೆ ಕಚೇರಿ ಆದೇಶ ಮಾಡುವಂತೆ ಸೂಚಿಸಿದರು. 

ಎಲ್ಲಾ ನಮೂನೆ-೭ ರ ಅರ್ಜಿಗಳಿಗೆ ಸಂಬAಧಿಸಿದAತೆ ನೋಟೀಸ್‌ನ್ನು ಕಡ್ಡಾಯವಾಗಿ ನೀಡಿರುವ ಬಗ್ಗೆ ಪರಿಶೀಲಿಸುವುದು. ಅತೀ ಹೆಚ್ಚು ನಮೂನೆ-೬, ೭, ೮ ಮತ್ತು ೮ ಎ ಸ್ವೀಕೃತವಾಗಿರುವ/ ಡಾಟಾ ಎಂಟ್ರಿ ಆಗಿರುವ ಮತಗಟ್ಟೆಗಳ ನಮೂನೆಗಳನ್ನು ತಹಶೀಲ್ದಾರರು ಕಡ್ಡಾಯವಾಗಿ ಮತ್ತೊಮ್ಮೆ ಸ್ಥಳ ಪರಿಶೀಲಿಸಬೇಕು. ಅತೀ ಕಡಿಮೆ / ಶೂನ್ಯ ನಮೂನೆ-೬, ೭, ೮ ಮತ್ತು ೮ ಎ ಸ್ವೀಕೃತವಾಗಿರುವ / ಡಾಟಾ ಎಂಟ್ರಿ ಆಗಿರುವ ಮತಗಟ್ಟೆಗಳನ್ನು ತಹಶೀಲ್ದಾರರು ಕಡ್ಡಾಯವಾಗಿ ಮತ್ತೊಮ್ಮೆ ಸ್ಥಳ ಪರಿಶೀಲಿಸಿ, ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. 

೨೦ ವರ್ಷ ಮೇಲ್ಪಟ್ಟ ಅರ್ಜಿದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಬಗ್ಗೆ, ಸಂಬAಧಪಟ್ಟವರು ಈ ಹಿಂದೆ ನೋಂದಣ ಯಾಗಿರುವ ಬಗ್ಗೆ, ಆಗದೇ ಇರುವ ಬಗ್ಗೆ ಯಾವುದೇ ದಾಖಲೆಗಳು ಇರುವ ಬಗ್ಗೆ ಪರಿಶೀಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಗತ್ಯ ಕ್ರಮ ವಹಿಸುವಂತೆ  ಮತದಾರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಅವರು ಸ್ಪಷ್ಟ ನಿರ್ದೇಶನ ನೀಡಿದರು. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬAಧಿಸಿದAತೆ ಚುನಾವಣಾ ಆಯೋಗದ ನಿರ್ದೇಶನ ಪಾಲಿಸಬೇಕು. ೧೮ ವರ್ಷ ಪೂರ್ಣಗೊಂಡವರೆಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಂತಾಗಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ತಹಶೀಲ್ದಾರರಾದ ಮಹೇಶ್, ಯೋಗಾನಂದ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ೦೨ ಹೊಸ ಕೋವಿಡ್-೧೯ ಪ್ರಕರಣ

      ಮಡಿಕೇರಿ ಡಿ.೨೮ :-ಜಿಲ್ಲೆಯಲ್ಲಿ ಮಂಗಳವಾರ ೦೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.  ೦೨ ಪ್ರಕರಣ ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ೦೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.          

         ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೯೦೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೧ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೨೧೯ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿದೆ. ೨೪೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೪೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೦೮ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಐಬಿಪಿಎಸ್ ನೇಮಕಾತಿ ಪರೀಕ್ಷೆಗೆ ತರಬೇತಿ

       ಮಡಿಕೇರಿ ಡಿ.೨೮ :-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐಬಿಪಿಎಸ್ ರಾಷ್ಟಿçÃಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.  

ಆಸಕ್ತರು ಜನವರಿ, ೦೫ ರೊಳಗೆ ಬೆಳಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.ಸಂ.೦೮೨೧-೨೫೧೫೯೪೪ ನ್ನು ಸಂಪರ್ಕಿಸಬಹುದು ಎಂದು  ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಅವರು ತಿಳಿಸಿದ್ದಾರೆ. 

ಡಿ.೨೯ ರಂದು ಕಸಾಪ ವತಿಯಿಂದ ಕುವೆಂಪು ಜನ್ಮ ದಿನಾಚರಣೆ

      ಮಡಿಕೇರಿ ಡಿ.೨೮ :-ಮಡಿಕೇರಿ ತಾಲೂಕು ಸಮಿತಿ ರಚನೆ ಮತ್ತು ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಬಗ್ಗೆ ಸಮಾಲೋಚಿಸಲು ಡಿಸೆಂಬರ್, ೨೯ ರಂದು ಮಧ್ಯಾಹ್ನ ೩ ಗಂಟೆಗೆ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ತಾಲೂಕು ಸದಸ್ಯರ ಸಭೆ ನಡೆಯಲಿದೆ. 

      ಸಭೆಯಲ್ಲಿ ನೂತನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮತ್ತು ತಾಲೂಕು ನಿಕಟಪೂರ್ವ ಅಧ್ಯಕ್ಷರಾದ ಕುಡೇಕಲ್ ಸಂತೋಷ್ ಅವರು ಉಪಸ್ಥಿತರಿರುತ್ತಾರೆ.  

      ಅಲ್ಲದೆ ಕುವೆಂಪು ಜನ್ಮದಿನಾಚರಣೆ ಪ್ರಯುಕ್ತ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿಗೆ ಉಪನ್ಯಾಸಕಿ ಡಿ.ಎಸ್.ಪ್ರತಿಮಾರೈ ಅವರು ಉಪನ್ಯಾಸ ನೀಡಲಿದ್ದಾರೆ ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಡಗು ಜಿ.ಪಂ. ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಅವರು ಭಾಗವಹಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ. 

 

ಡಿ.೨೯ ರಂದು ವಿದ್ಯುತ್ ವ್ಯತ್ಯಯ

 ಮಡಿಕೇರಿ ಡಿ.೨೮ :-ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ ಕೇಂದ್ರದಿAದ ಹೊರ ಹೋಗುವ ಎಫ್ ೧೨ ರಾಜಸೀಟ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಿರುವುದರಿಂದ ಡಿಸೆಂಬರ್, ೨೯ ರಂದು ಬೆಳಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೨ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. 

 ಆದ್ದರಿಂದ ಮಡಿಕೇರಿ ನಗರದ ಮಂಗಳೂರು ರಸ್ತೆ, ಡಿ.ಸಿ.ಕಚೇರಿ, ರಾಜಸೀಟ್, ರೇಸ್‌ಕೋರ್ಸ್ ರಸ್ತೆ, ಸೀನಿಯರ್ ಕಾಲೇಜು, ಮುಳಿಯ ಬಡಾವಣೆ, ವಿದ್ಯಾನಗರ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಅವರು ಕೋರಿದ್ದಾರೆ. 

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,