ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಭೇಟಿ
ಮಡಿಕೇರಿ ಡಿ.30 :-ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2015 ರಿಂದ 2020 ರವರೆಗಿನ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಕೊರೆಸಲಾದ ಕೊಳವೆ ಬಾವಿ ಸಂಬAಧಿಸಿದAತೆ ಪರಿಶೀಲಿಸಲು ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿಯು ಜನವರಿ, 04 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಅಭಿವೃದ್ದಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ಸಂಬAಧ ಮಾಹಿತಿ ನೀಡುವಂತೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೆಯೇ ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಶಿಷ್ಟಾಚಾರ ಪಾಲಿಸುವಂತೆ ನಿರ್ದೇಶನ ನೀಡಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಚಂದ್ರಶೇಖರ್ ಅವರು ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಪ್ರವಾಸ ಕಾರ್ಯಕ್ರಮ ಸಂಬAಧಿಸಿದAತೆ ಅಗತ್ಯ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಧಿಕಾರಿ ಕೆ.ಶ್ರೀನಿವಾಸ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಪಂಚಾಯತ್ ರಾಜ್ ಇಲಾಖೆಯ ಇಇ ಮಂಜುನಾಥ್, ಸಣ್ಣ ನೀರಾವರಿ ಇಲಾಖೆಯ ಎಇಇ ಕಾಂತರಾಜು, ಸೆಸ್ಕ್ ಎಇಇ ವಿನಯ ಕುಮಾರ್, ಭೂವಿಜ್ಞಾನಿ ಸೌಮ್ಯ ಅವರು ಹಲವು ಮಾಹಿತಿ ನೀಡಿದರು.
ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಣೆ
ಮಡಿಕೇರಿ ಡಿ.30 :-ನಗರದ ಗಣಪತಿ ಬೀದಿಯಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ವೀಕ್ಷಣೆ ಮಾಡಿದರು.
ನಗರೋತ್ಥಾನದಡಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಎರಡು-ಮೂರು ಮನೆಯವರು ರಸ್ತೆ ಅಗಲೀಕರಣಕ್ಕೆ ಅಸಹಕಾರ ತೋರಿದ್ದರು. ಆದ್ದರಿಂದ ಈ ಸಂಬAಧ ತಾಂತ್ರಿಕ ಎಂಜಿನಿಯರ್ ಅವರಿಂದ ಮಾಹಿತಿ ಪಡೆದು ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನಗರಸಭಾ ಸದಸ್ಯರಾದ ಅಮೀನ್ ಮೊಹಿಸಿನ್, ಮನ್ಸೂರ್ ಖಾನ್, ನೀಮ ಹರ್ಷದ್, ಪೌರಾಯುಕ್ತರಾದ ರಾಮದಾಸ್, ಡಿಯುಡಿಸಿ ಇಇ ಶಿವಾನಂದ, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಜೆಇ ಜಿ.ಎಚ್.ನಾಗರಾಜು, ಶಮಂತ್ ಕುಮಾರ್ ಇತರರು ಇದ್ದರು.
ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಅವರು ನಗರದ ಗಣಪತಿ ಬೀದಿಯಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು ಕಟ್ಟಡದ ತಾಂತ್ರಿಕ ಎಂಜಿನಿಯರ್ ಅವರನ್ನು ಕರೆಸಿ, ಅಗತ್ಯ ತುರ್ತು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಅಂತರ ರಾಷ್ಟಿçÃಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ
ಮಡಿಕೇರಿ ಡಿ.30 :-ಹೊದ್ದೂರು ಬಳಿ ಪಾಲೆಮಾಡುವಿನಲ್ಲಿ ಸುಮಾರು 12.70 ಎಕರೆ ಜಾಗದಲ್ಲಿ ಅಂತರ ರಾಷ್ಟಿçÃಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯಿತು.
ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ತಹಶೀಲ್ದಾರ್ ಮಹೇಶ್, ಹೊದ್ದೂರು ಗ್ರಾ.ಪಂ.ಅಧ್ಯಕ್ಷರಾದ ಕುಸುಮ, ಸದಸ್ಯರಾದ ಮೊಣ್ಣಪ್ಪ, ಪ್ರಮುಖರಾದ ಅಮಿನ್ ಮೊಹಿಸಿನ್, ನಿರ್ವಾಣಪ್ಪ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ವಹಣಾ ಸಮಿತಿ ಸದಸ್ಯರಾದ ಶಾಂತಿ ಸ್ವರೂಪ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕರಾದ ಪೃಥ್ವಿ ದೇವಯ್ಯ ಇತರರು ಇದ್ದರು.
ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಕ್ರಿಕೆಟ್ ಕ್ರೀಡಾಪಟುಗಳ ಬೆಳವಣ ಗೆಗೆ ಅಂತರ ರಾಷ್ಟಿçÃಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಸಹಕಾರಿ ಆಗಲಿದೆ ಎಂದು ಪೃಥ್ವಿ ದೇವಯ್ಯ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಗುರುವಾರ 14 ಹೊಸ ಕೋವಿಡ್-19 ಪ್ರಕರಣ
ಮಡಿಕೇರಿ ಡಿ.30 :-ಜಿಲ್ಲೆಯಲ್ಲಿ ಗುರುವಾರ 14 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 12 ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು 02 ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 05, ವಿರಾಜಪೇಟೆ ತಾಲ್ಲೂಕಿನಲ್ಲಿ 03, ಸೋಮವಾರಪೇಟೆ ತಾಲ್ಲೂಕಿನಲ್ಲಿ 06 ಹೊಸ ಕೋವಿಡ್-19 ಪ್ರಕರಣಗಳು ಕಂಡುಬAದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,933 ಆಗಿದ್ದು, ಒಟ್ಟು 35,220 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 438 ಮರಣ ಪ್ರಕರಣಗಳು ವರದಿಯಾಗಿದೆ. 275 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ 40 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.54 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಮಾಸಿಕ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
ಮಡಿಕೇರಿ ಡಿ.30 :-2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10 ಸಾವಿರದಂತೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, 4.50 ಲಕ್ಷ, ಪ್ರವರ್ಗ-2ಎ, 3ಎ,3ಬಿ 3.50 ಲಕ್ಷ ಆಗಿದೆ. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ/ ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್‌ಡಿ ಅಧ್ಯಯನಕ್ಕಾಗಿ ನೋಂದಣ ಮಾಡಿಕೊಂಡಿರಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ, 16 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್ https://www.bcwd.karnataka.gov.in ಟಿ ಸಹಾಯವಾಣ ಸಂಖ್ಯೆ: 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಜ.07 ರಂದು ವಾರ್ಷಿಕ ಮಹಾಸಭೆ
ಮಡಿಕೇರಿ ಡಿ.30 :-ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ವಾರ್ಷಿಕ ಮಹಾಸಭೆಯು ಡಿಸೆಂಬರ್ 31 ರ ಬದಲಾಗಿ, ಜನವರಿ, 07 ರಂದು ಬೆಳಗ್ಗೆ 10 ಗಂಟೆಗೆ ನಗರದ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪೋಷಣಾ ಭತ್ಯೆಗೆ ಅರ್ಜಿ ಆಹ್ವಾನ
ಮಡಿಕೇರಿ ಡಿ.30 :-ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ ಉತ್ತೇಜಿಸಲು ಅವರ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣ ಕ ವೃತ್ತಿ ತರಬೇತಿ ಮತ್ತು ಇತರೆ ಅವಶ್ಯಕತೆ ಪೂರೈಸಲು ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ ಬಾಲನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ 2015 ರಡಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪ್ರಾಯೋಜಕತ್ವದಡಿ ಪಾಲನೆ ಮತ್ತು ಪೋಷಣೆ ಅಗತ್ಯವಿರುವ 0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ. ಒಂದು ಸಾವಿರ ಗಳಂತೆ 3 ವರ್ಷಗಳವರೆಗೆ ಒಂದು ಕುಟುಂಬದ ಗರಿಷ್ಠ 2 ಮಕ್ಕಳಿಗೆ ಪೋಷಣಾ ಭತ್ಯೆ ನೀಡುವ ಕಾರ್ಯಕ್ರಮಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಂದೆ/ ಕುಟುಂಬದ ದುಡಿಯುವ ಸದಸ್ಯರನ್ನು ಕಳೆದುಕೊಂಡಿದ್ದಲ್ಲಿ, ತಂದೆ ತಾಯಿ ಇಲ್ಲದ ಮಕ್ಕಳಿಗೆ, ತಂದೆ ತಾಯಿಗಳು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ, ಕುಟುಂಬಕ್ಕೆ ಆಧಾರವಾಗಿದ್ದ ಪೋಷಕರು ಜೈಲಿನಲ್ಲಿದ್ದರೆ, ಅಂತಹ ಕುಟುಂಬದ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ತಿಳಿಸಿದ್ದಾರೆ.
ಚೆಕ್ ವಿತರಣೆ
ಮಡಿಕೇರಿ ಡಿ.30 : ಕೋವಿಡ್-19 ಮಹಾಮಾರಿಯಿಂದ ಅಕಾಲಿಕ ಮರಣ ಹೊಂದಿದ ಬಿಪಿಎಲ್ ಕುಟುಂಬದ ಸದಸ್ಯರಿಗೆ ಸರ್ಕಾರದ ವತಿಯಿಂದ ನೀಡಲಾಗುವ 1 ಲಕ್ಷ ರೂ. ಧನಾದೇಶ ಚೆಕ್ಕನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಗುರುವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿತರಿಸಿದರು. ತಹಶೀಲ್ದಾರ್ ಮಹೇಶ್, ಶಿರಸ್ತೇದಾರ್ ದೇವರಾಜು ಇದ್ದರು.
ಶಸ್ತçಚಿಕಿತ್ಸಾ ಶಿಬಿರ
ಮಡಿಕೇರಿ ಡಿ.30 :-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ-2022 ರ ಮಾಹೆಯಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಮಹಿಳಾ ಸಂತಾನಹರಣ ಶಸ್ತçಚಿಕಿತ್ಸಾ ಶಿಬಿರ ನಡೆಯಲಿದೆ.
ಜನವರಿ, 11 ರಂದು ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆ, ಜನವರಿ, 12 ರಂದು ಸಿದ್ದಾಪುರ, ಜ.14 ರಂದು ನಾಪೋಕ್ಲು, ಜನವರಿ, 18 ರಂದು ಗೋಣ ಕೊಪ್ಪ, ಜನವರಿ 19 ರಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲ್ಯಾಪ್ರೊಸ್ಕೋಪಿಕ್ ಚಿಕಿತ್ಸೆ ನಡೆಯಲಿದೆ.
ಜನವರಿ, 05 ರಂದು ಚೆಟ್ಟಳ್ಳಿ, ಜನವರಿ, 07 ರಂದು ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟ್ಯುಬೆಕ್ಟಮಿ ಶಸ್ತçಚಿಕಿತ್ಸೆ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಬಾಲ ಹಿತೈಷಿ ಯೋಜನೆ; ಮಾರ್ಗದರ್ಶಕರಾಗಿ ನೋಂದಾಯಿಸಿಕೊಳ್ಳಿ
ಮಡಿಕೇರಿ ಡಿ.30 :-ಮಕ್ಕಳ ರಕ್ಷಣಾ ನಿರ್ದೇಶನಾಲಯ ವತಿಯಿಂದ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬಾಧಿತ ಮಕ್ಕಳನ್ನು ಬೆಂಬಲಿಸಲು ಹೆಚ್ಚಿನ ಸಂದರ್ಭಗಳಲ್ಲಿ ಮಗುವಿಗೆ ಪಾಲನೆ ಮತ್ತು ರಕ್ಷಣೆ ಒದಗಿಸಲು ವಿಸ್ತೃತ ಕುಟುಂಬ/ ಏಕಪೋಷಕರ ನೆರವಿದ್ದರೂ ಸಹ ತಂದೆ, ತಾಯಿಯರನ್ನು ಕಳೆದುಕೊಂಡ 18 ವರ್ಷದೊಳಗಿನ ಮಗುವನ್ನು ಮಾನಸಿಕ ಆಘಾತದಿಂದ ಹೊರತರಲು ಹಾಗೂ ಮಗುವಿನ ದೀರ್ಘಕಾಲಿಕ ಸಕಾರಾತ್ಮಕ ಬೆಳವಣ ಗೆಗೆ ಮತ್ತು ಸರ್ವೋತೋಮುಖ ಅಭಿವೃದ್ಧಿಗೆ ಅನುವಾಗುವಂತೆ ಬಾಲ ಹಿತೈಷಿ (ಮಾರ್ಗದರ್ಶಕತ್ವ/ ಮೆಂಟರ್ಶಿಪ್) ಎಂಬ ಹೊಸ ಯೋಜನೆ ಜಾರಿಗೊಳಿಸಲಾಗಿದೆ.
ಇಬ್ಬರು ಪೋಷಕರು ಅಥವಾ ಪೋಷಕರಲ್ಲಿ ಒಬ್ಬರನ್ನು ಕಳೆದುಕೊಂಡ ಆಘಾತಕ್ಕೆ ಒಳಗಾಗಿರುವ ಮಕ್ಕಳಿಗೆ ಶೈಕ್ಷಣ ಕವಾಗಿ, ಭಾವನಾತ್ಮಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ, ತಮ್ಮ ಅತ್ಯುನ್ನತ ಸಾಮರ್ಥ್ಯವನ್ನು ಸಾಧಿಸಲು ಅವರಿಗೆ ಇದಕ್ಕೆ ಪೂರಕವಾಗಿ ಸಹಾಯ ಮಾಡಲು ಮತ್ತು ಮಗುವಿಗೆ ಮಾರ್ಗದರ್ಶನ ನೀಡಲು ಉತ್ಸುಕರಾಗಿರುವ ಮಾರ್ಗದರ್ಶಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೋಂದಾಯಿಸಿಕೊಳ್ಳಬಹುದು.
ಮಾರ್ಗದರ್ಶಕರಿಗೆ ಮಕ್ಕಳ ರಕ್ಷಣಾ ನಿರ್ದೇಶಾಲಯ ವತಿಯಿಂದ ಸೂಕ್ತ ತರಬೇತಿ ನೀಡಲಾಗುವುದು. ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುವವರಿಗೆ ಇಲಾಖೆಯಿಂದ ಯಾವುದೇ ಗೌರವಧನ, ಶುಲ್ಕವನ್ನು ಪಾವತಿಸಲಾಗುವುದಿಲ್ಲ. ಹಾಗೂ ಇದೊಂದು ಸಾಮಾಜಿಕ ಜವಾಬ್ದಾರಿಯಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರ ಕಚೇರಿ, ಕಲ್ಯಾಣ ಮಂಟಪದ ಮುಂಭಾಗ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ ದೂ.ಸಂ. 08272-228800 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ತಿಳಿಸಿದ್ದಾರೆ.
ಡಿ.31 ರಂದು ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ
ಮಡಿಕೇರಿ ಡಿ.30 :-ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಡಿಸೆಂಬರ್, 31 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಕಾವೇರಿ ಬ್ಲಾಕ್‌ನ ಲೆಕ್ಚರ್ ಹಾಲ್‌ನಲ್ಲಿ ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಸಾಹಿತಿಗಳು ಮತ್ತು ಚಿಂತಕರಾದ ಅರವಿಂದ ಚೊಕ್ಕಾಡಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಶಸûçಚಿಕಿತ್ಸಕರು ಮತ್ತು ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಡಾ.ನಂಜುAಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿವಾಸಿ ವೈದ್ಯಕೀಯ ಅಧಿಕಾರಿ ಡಾ.ರೂಪೇಶ್ ಗೋಪಾಲ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಶ್ವಂತ್ ಕೋಳಿಬೈಲು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಎಸ್.ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ.
ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ
ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಭೇಟಿ
ಇನ್ನೂ ಮುಂದೆ ರೈತರ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಪಹಣಿ
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network