Header Ads Widget

ಸರ್ಚ್ ಕೂರ್ಗ್ ಮೀಡಿಯ

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹುತಾತ್ಮ ಸೈನ್ಯಾಧಿಕಾರಿಗಳಿಗೆ ಶ್ರದ್ಧಾಂಜಲಿ

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹುತಾತ್ಮ ಸೈನ್ಯಾಧಿಕಾರಿಗಳಿಗೆ ಶ್ರದ್ಧಾಂಜಲಿ

   


ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ,ನೀಲಗಿರಿಯಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ದೇಶದ ಹೆಮ್ಮೆಯ ಸಿ.ಡಿ.ಎಸ್ ಜ.ಬಿಪಿನ್ ರಾವತ್ ,ಮತ್ತವರ ಪತ್ನಿ ಮತ್ತು ಇತರ  11 ಮಂದಿ ಸೇನಾಧಿಕಾರಿಗಳು ಮತ್ತು ಸೇನಾಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ತಾ.11.12.2021ರಂದು ಚೆಂಬು ಸೊಸೈಟಿಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

   ಹುತಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ನುಡಿನಮನ ಸಲ್ಲಿಸಿ ,ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಸಂಘದ ಅದ್ಯಕ್ಷರಾದ ಶ್ರೀ ಅನಂತ್ ಊರುಬೈಲು ರವರು ಜನರಲ್ ಬಿಪಿನ್ ರಾವತ್ ರವರ ವ್ಯಕ್ತಿತ್ವ ,ದೇಶದ ರಕ್ಷಣೆಗೆ ಅವರ ಕೊಡುಗೆ ಮತ್ತು ಬದ್ದತೆಯನ್ನು ಸ್ಮರಿಸಿ,ಎಲ್ಲ ಸೇನಾದಿಕಾರಿಗಳ ಆತ್ಮಕ್ಕೆ ಶಾಂತಿ ಕೋರಿದರು.

    ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಶ್ರೀ ರಾಜಾರಾಮ ಕಳಗಿ ,ಸಿಇಒ ಆನಂದ ಬಿ.ಕೆ ,ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,