ಓಮೈಕ್ರಾನ್; ಅಗತ್ಯ ಮುನ್ನೆಚ್ಚರ ವಹಿಸಿ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ
ಮಡಿಕೇರಿ ಡಿ.07: ಕೊರೊನಾ ವೈರಾಣುವಿನ ರೂಪಾಂತರ ತಳಿ ಓಮೈಕ್ರಾನ್ ಅಲ್ಲಲ್ಲಿ ಕೇಳಿಬರುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಸಂಶೋಧನಾ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ಓಮೈಕ್ರಾನ್ ಅಲ್ಲಲ್ಲಿ ಹರಡುತ್ತಿರುವ ಹಿನ್ನೆಲೆ ಅಗತ್ಯ ಮುನ್ನೆಚ್ಚರ ವಹಿಸಬೇಕು. ಜೊತೆಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಕೋವಿಡ್-19 ಪರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಕೋವಿಡ್-19 ಪಾಸಿಟಿವ್ ಬಂದಲ್ಲಿ ತಕ್ಷಣವೇ ಆರೋಗ್ಯ ಸೇವೆ ಕಲ್ಪಿಸುವುದು, ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
18 ವರ್ಷ ಮೇಲ್ಪಟ್ಟವರೆಲ್ಲರೂ ಪ್ರಥಮ ಮತ್ತು ದ್ವಿತೀಯ ಡೋಸ್ ಪಡೆಯಲು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ.ಬಿ.ಸಿ.ನವೀನ್ ಕುಮಾರ್ ಅವರು ಮಾತನಾಡಿ ಕೋವಿಡ್-19 ಮೂರನೇ ಅಲೆ ಕೇಳಿಬರುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಔಷಧಿ ಹಾಗೂ ಮೂಲ ಸೌಲಭ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಸಲಹೆ ಮಾಡಿದರು.
ಓಮೈಕ್ರಾನ್ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಶೋಧನಾ ಕೇಂದ್ರವಾಗಿರುವುದರಿಂದ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ನರ ರೋಗ, ಕಿಡ್ನಿ, ಹೃದಯ, ಕರುಳು ಹೀಗೆ ಹಲವು ಖಾಯಿಲೆಗಳ ಸಂಬಂಧ ತಜ್ಞ ವೈದ್ಯರನ್ನು ಆಹ್ವಾನಿಸಿ, ಆರೋಗ್ಯ ಸೇವೆ ಕಲ್ಪಿಸಬೇಕು. ಬಡ ಜನರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಕಾರ್ಡ್ ಮೂಲಕ ಹೆಚ್ಚಿನ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗುತ್ತದೆ. ಜೊತೆಗೆ ಹತ್ತಿರದ ಜಿಲ್ಲೆಗಳಿಗೆ ಹೋಗುವುದು ತಪ್ಪುತ್ತದೆ ಎಂದು ಅವರು ತಿಳಿಸಿದರು.
‘ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಾ.ನವೀನ್ ಕುಮಾರ್ ಒತ್ತಿ ಹೇಳಿದರು.’
ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ವೈದ್ಯಕೀಯ ಅಧೀಕ್ಷಕರಾದ ಡಾ.ಮಂಜುನಾಥ್, ಡಾ.ಲೋಕೇಶ್, ಸೂಕ್ಷ್ಮಾಣು ಜೀವಿ ವಿಭಾಗದ ಮುಖ್ಯಸ್ಥರಾದ ಡಾ.ನಜೀಮ, ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್, ಡಾ.ರೂಪೇಶ್, ಡಾ.ಅಜೀಜ್, ಡಾ.ಆನಂದ್, ಡಾ.ಪ್ರವೀಣ್, ಡಾ.ಪ್ರದೀಪ್, ಡಾ.ಕುಶ್ವಂತ್, ಡಾ.ಶ್ವೇತಾ ಇತರರು ಕೋವಿಡ್-19 ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network