Ad Code

Responsive Advertisement

ಸ್ವಯಂ ಉದ್ಯೋಗ ನೇರ ಸಾಲಕ್ಕೆ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗ ನೇರ ಸಾಲಕ್ಕೆ ಅರ್ಜಿ ಆಹ್ವಾನ 


ಮಡಿಕೇರಿ ಡಿ.07: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2021-22 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. 

ಅರ್ಹರು 2022 ರ ಜನವರಿ, 18 ರೊಳಗೆ  ಅರ್ಜಿಗಳನ್ನು ಕಡ್ಡಾಯವಾಗಿ ಆನ್‍ಲೈನ್ ಮೂಲಕ kacdc.karnataka.gov.in ಇಲ್ಲಿ ಸಲ್ಲಿಸಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು  ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3 ಲಕ್ಷಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.  

ಈಗಾಗಲೇ ಬೇರೆ ಯಾವುದೇ ನಿಗಮಗಳ ಯೋಜನೆಗಳಲ್ಲಿ ಅಥವಾ ಈ ನಿಗಮದಲ್ಲೇ ಈ ಹಿಂದೆ ಸಾಲ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಸಾಲ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ. ಮಹಿಳೆಯರಿಗೆ ಶೇ.33 ಹಾಗೂ ವಿಕಲಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ. ನಿಮ್ಮ ಆಧಾರ್ ಸಂಖ್ಯೆ ನಿಮ್ಮ ಮೊಬೈಲ್ ಜೋಡಣೆಯಾಗಿರಬೇಕು. ನಿಮ್ಮ ಸಂಖ್ಯೆ ನಿಮ್ಮ ಬ್ಯಾಂಕ್ ಖಾತೆಗೆ ಜೋಡಣೆಯಾಗಿರಬೇಕು.

      ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ +91 9448451111, (ಬೆಳಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು www.kacdc.karnataka.gov.in ಇಲ್ಲಿ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,