Header Ads Widget

Responsive Advertisement

ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ಮಡಿಕೇರಿ ಡಿ.16: ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.  2021-22 ನೇ ಸಾಲಿಗೆ ಪ್ರಿ-ಮೆಟ್ರಿಕ್ ಹಾಗೂ ಪೋಸ್ಟ್- ಮೆಟ್ರಕ್ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ https://scholarships.gov.in  ನಲ್ಲಿ ಅರ್ಜಿ ಸಲ್ಲಿಸಲು  ಡಿಸೆಂಬರ್ 31  ಕೊನೆಯ ದಿನವಾಗಿದೆ.

      ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಈ ಯೋಜನೆ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ಕೋರಿದ್ದಾರೆ. 

     ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ಮಡಿಕೇರಿ ದೂ:ಸಂ: 08272-295829 ಅಥವಾ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಮಡಿಕೇರಿ ಮೊಬೈಲ್ ಸಂ:-8073192914, ಸೋಮವಾರಪೇಟೆ ದೂ:-9008685129 ಮತ್ತು ವಿರಾಜಪೇಟೆ ದೂ:- 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ  ಅಂಗವಿಕಲರ ಇಲಾಖೆಯ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,