ಇನ್ನೂ ಮುಂದೆ ರೈತರ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಪಹಣಿ
ರಾಜ್ಯದ 40 ಲಕ್ಷ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಜಮೀನಿನ ಪಹಣಿ ಹಾಗೂ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಉಚಿತವಾಗಿ ವಿತರಿಸುವ ಅಭಿಯಾನ ನಡೆಯಲಿದ್ದು, ಜಮೀನಿಗೆ ಸಮಗ್ರ ನಕ್ಷೆ, ಪೋಡಿ ಪತ್ರ, ಪಾವತಿ ದಾಖಲೆ, ಇಸಿ ಸೇರಿದಂತೆ ಇನ್ನಿತರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಉಚಿತವಾಗಿ ನೀಡುವ ಅಭಿಯಾನ ರಾಜ್ಯದಾದ್ಯಂತ ಒಂದೇ ದಿನ ನಡೆಯಲಿದೆ. ಇದಕ್ಕಾಗಿ ರೈತರು ಯಾವುದೇ ಹಣ ಪಾವತಿ ಮಾಡುವ ಅಗತ್ಯವಿಲ್ಲ. ದಾಖಲೆಗಳು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಹೊಸತನಕ್ಕೆ ಯೋಜನೆ ನಡೆದಿದ್ದು, ಸಮಗ್ರ ಬದಲಾವಣೆ ಮಾಡಲು ಮುಂದಾಗಿದ್ದೇವೆ. ಈ ಬದಲಾವಣೆ ವಿನೂತನ ಹಾಗೂ ಅತ್ಯಂತ ಸರಳೀಕರಣವಾಗಿರಲಿದೆ. ಜಮೀನಿಗೆ ಸಂಬಂಧಿಸಿದ ದಾಖಲೆಗಳ ಬಗ್ಗೆ ರೈತರಿಗೆ ಗೊತ್ತಿರಬೇಕು. ಮಾಹಿತಿಯ ಕೊರತೆಯಿಂದಾಗಿ ಅವರು ಪಹಣಿ ಸೇರಿದಂತೆ ಇನ್ನಿತರ ದಾಖಲೆಗಳಿದ್ದರೂ ಅದರ ಬಗ್ಗೆ ಸಂಪೂರ್ಣ ಮಾಹಿತಿಯಿರುವುದಿಲ್ಲ. ರಾಜ್ಯದ ಜನರ ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ಯಲು ಈಗಾಗಲೇ ಜಿಲ್ಲಾಧಿಕಾರಿಗಳನ್ನು ಹಳ್ಳಿಗಳತ್ತ ಕಳಿಸುತ್ತಿದ್ದೇವೆ. ಜಿಲ್ಲಾಧಿಕಾರಿ ಪ್ರತಿ ಮೂರನೇ ಶನಿವಾರ ಹಳ್ಳಿಗೆ ತೆರಳಿ ಜಿಲ್ಲಾಧಿಕಾರಿಗಳು ಗ್ರಾಮೀಣ ಜನರ ಕಂದಾಯ ಇಲಾಖೆಯ ಎಲ್ಲಾ ಅಗತ್ಯದ ಸೇವೆಗಳನ್ನು ತ್ವರಿತವಾಗಿ ಕಲ್ಪಿಸಲಿದ್ದಾರೆ.
ಜಮೀನಿನ ಪಹಣಿ ಪಡೆಯಲು ನಾಡಕಚೇರಿಯ ಎದುರು ಸಾಲಿನಲ್ಲಿ ನಿಂತುಕೊಳ್ಳುವ ಅವಶ್ಯಕತೆಯೂ ಇಲ್ಲ. ಈಗ ರೈತರು ಮೊಬೈಲ್ ನಲ್ಲಿಯೇ ಪಹಣಿಯನ್ನು ವೀಕ್ಷಿಸಬಹುದು ಹಾಗೂ ಮೊಬೈಲ್ ನಲ್ಲಿಯೇ ಡೌನ್ಲೋಡ್ ಸಹ ಮಾಡಿಕೊಳ್ಳಬಹುದು. ಹೌದು ಭೂಮಿ ಆನ್ಲೈನ್ ಪೋರ್ಟಲ್ ಇಂತಹದೊಂದು ಸೌಲಭ್ಯವನ್ನು ರೈತರಿಗೆ ಈಗಾಗಲೇ ಒದಗಿಸಿದೆ. ಮೊಬೈಲ್ ನಲ್ಲಿಯೇ ಪಹಣಿ ಡೌನ್ಲೋಡ್ ಮಾಡಿಕೊಳ್ಳಲು ಈ ಲಿಂಕ್ https://landrecords.karnataka.gov.in/Service38/GuestUserInfo.aspx ಮೇಲೆ ಕ್ಲಿಕ್ ಮಾಡಬೇಕು. ಆಗ ಭೂಮಿ ತಂತ್ರಾಂಶದ ವೆಬ್ಸೈಟ್ ಓಪನ್ ಆಗುತ್ತದೆ. ಇಲ್ಲಿ ನಿಮ್ಮ ಹೆಸರು, ಮೊಬೈಲ್ ನಂಬರ್, ಈ ಮೇಲ್ ಐಡಿ, ಆಧಾರ್ ಕಾರ್ಡ್ ನಂಬರ್, ನಮೂದಿಸಿ ಪ್ರೊಸೀಡ್ ಮೇಲೆ ಕ್ಲಿಕ್ ಮಾಡಿದಾಗ ಮತ್ತೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ , ಸರ್ವೆ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ Surnoc ಕಾಲಂನಲ್ಲಿ ಸ್ಟಾರ್ ಆಯ್ಕೆ ಮಾಡಿ ಹಿಸ್ಸಾನ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಯಾವ ವರ್ಷದ ಪಹಣಿ ಬೇಕೋ ಎಂಬುದನ್ನು ಆಯ್ಕೆ ಮಾಡಿ Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ಜಮೀನಿನ ಜಮೀನಿನ ಮಾಲೀಕನ ಹೆಸರು, ಸರ್ವೆನಂಬರ್ ಸೇರಿದಂತೆ ಎಲ್ಲಾ ಮಾಹಿತಿ ಕಾಣುತ್ತದೆ. ನೀವು ಪಹಣಿ ನೋಡಬೇಕಾದರೆ ವೀವ್ ಆರ್.ಟಿಸಿ ಮೇಲೆ ಕ್ಲಿಕ್ ಮಾಡಬೇಕು. ಒರಿಜಿನಲ್ ಪಹಣಿ ಬೇಕಾಗದರೆ ಆನ್ಲೈನ್ ನಲ್ಲಿ 10 ರೂಪಾಯಿ ಪಾವತಿಸಬೇಕಾಗುತ್ತದೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network