Header Ads Widget

ಸರ್ಚ್ ಕೂರ್ಗ್ ಮೀಡಿಯ

ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ

ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ 


ಮಡಿಕೇರಿ ಡಿ.30: ಹೊದ್ದೂರು ಬಳಿ ಪಾಲೆಮಾಡುವಿನಲ್ಲಿ ಸುಮಾರು 12.70 ಎಕರೆ ಜಾಗದಲ್ಲಿ  ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯಿತು. 

ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ತಹಶೀಲ್ದಾರ್ ಮಹೇಶ್, ಹೊದ್ದೂರು ಗ್ರಾ.ಪಂ.ಅಧ್ಯಕ್ಷರಾದ ಕುಸುಮ, ಸದಸ್ಯರಾದ ಮೊಣ್ಣಪ್ಪ, ಪ್ರಮುಖರಾದ ಅಮಿನ್ ಮೊಹಿಸಿನ್, ನಿರ್ವಾಣಪ್ಪ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ವಹಣಾ ಸಮಿತಿ ಸದಸ್ಯರಾದ ಶಾಂತಿ ಸ್ವರೂಪ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕರಾದ ಪೃಥ್ವಿ ದೇವಯ್ಯ ಇತರರು ಇದ್ದರು.

ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಕ್ರಿಕೆಟ್ ಕ್ರೀಡಾಪಟುಗಳ ಬೆಳವಣಿಗೆಗೆ ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಸಹಕಾರಿ ಆಗಲಿದೆ ಎಂದು  ಪೃಥ್ವಿ ದೇವಯ್ಯ ಅವರು ಅಭಿಪ್ರಾಯ ಪಟ್ಟಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,