Header Ads Widget

ಸರ್ಚ್ ಕೂರ್ಗ್ ಮೀಡಿಯ

ಬೆಳೆಹಾನಿ ಪರಿಹಾರ ವಿತರಣೆ

ಬೆಳೆಹಾನಿ ಪರಿಹಾರ ವಿತರಣೆ 


ಮಡಿಕೇರಿ ಡಿ.09: ಪ್ರಸಕ್ತ ಸಾಲಿನ ಬೆಳೆಹಾನಿ ಸಂಬಂಧ ಕೊಡಗು ಜಿಲ್ಲೆಯಲ್ಲಿ 3,593 ರೈತರ ಖಾತೆಗೆ 5.011 ಕೋಟಿ ರೂ. ನಗದು ನೇರ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. 

ಉಳಿದಂತೆ ಆದ್ಯತೆ ಮೇರೆ ಬೆಳೆಹಾನಿ ಮಾಹಿತಿಯನ್ನು ದಾಖಲಿಸಲಾಗುತ್ತಿದ್ದು, ಶೀಘ್ರದಲ್ಲೇ ಬೆಳೆಹಾನಿ ಸಂತ್ರಸ್ತರಿಗೆ ಪರಿಹಾರ ಪಾವತಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. 

ಬೆಳೆ ಹಾನಿ ಸಂಬಂಧಿಸಿದಂತೆ ಡಾಟಾ ಎಂಟ್ರಿ ಮಾಡಲು ಡಿಸೆಂಬರ್, 21 ರವರೆಗೆ ಅವಕಾಶವಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮನವಿ ಮಾಡಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,