ಬೆಳೆ ವಿಮೆ ಯೋಜನೆಯ ಜಿಲ್ಲಾ ಮಟ್ಟದ ಕುಂದುಕೊರತೆ ನಿವಾರಣಾ ಸಮಿತಿ ಸಭೆ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೃಷಿ ಇಲಾಖೆ ಮೂಲಕ ನೀಡುವ ಬೆಳೆ ವಿಮೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2016-17ನೇ ಸಾಲಿನಿಂದ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮತ್ತಿತರ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದಾಗ ರೈತರಿಗೆ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. ಎಂದು ತಿಳಿಸಿದರು.
ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ರಷ್ಟು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ವಿವರಿಸಿದರು.
ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ 2020-21 ನೇ ಸಾಲಿನಲ್ಲಿ ಒಟ್ಟು 622 ರೈತರು ಈ ಯೋಜನೆಯಡಿ ನೋಂದಣಿಯಾಗಿದ್ದು, ಒಟ್ಟು 142 ರೈತರಿಗೆ ಈ ಯೋಜನೆಯಡಿ ಒಟ್ಟು 12,39,897 ರೂ ಗಳ ಪರಿಹಾರ ಮೊತ್ತ ವಿತರಿಸಲಾಗಿದೆ ಎಂದರು.
2021-22 ನೇ ಸಾಲಿನ ಜುಲೈ ಮಾಹೆಯಲ್ಲಿ ಉಂಟಾದ ಬೆಳೆ ನಷ್ಟದಲ್ಲಿ ಪೊನ್ನಂಪೇಟೆ ಹೋಬಳಿಯ ರವಿಶಂಕರ್ ಪಿ.ಬಿ ರೈತರ ಒಟ್ಟು 10.41 ಎಕರೆಯೆಷ್ಟು ಬೆಳೆ ನಷ್ಟವಾಗಿದ್ದು, ರೈತರು ಪಾವತಿಸಿದಂತಹ 4445.32 ವಿಮಾ ಕಂತಿಗೆ ಒಟ್ಟು 92,056 ರೂ.ಗಳ ಪರಿಹಾರ ಮೊತ್ತವು ಇತ್ಯರ್ಥವಾಗಿದೆ ಎಂದು ಶಬನಾ ಎಂ.ಶೇಕ್ ಅವರು ಮಾಹಿತಿ ನೀಡಿದರು.
2021-22ನೇ ಸಾಲಿನ ವಿಮಾ ಕಂತಿನ ವಿವರ(ಎಕರೆಗೆ); ಭತ್ತ ಬೆಳೆಗೆ ವಿಮಾ ಮೊತ್ತ ರೂ. 34,804, ಪ್ರೀಮಿಯಂ ಮೊತ್ತ ರೂ. 10,093, ರೈತರ ಪಾಲು ರೂ. 696, ಕೇಂದ್ರದ ಪಾಲು ರೂ. 4698, ರಾಜ್ಯದ ಪಾಲು ರೂ.4698.
ಭತ್ತ(ಮಳೆಯಾಶ್ರಿತ) ವಿಮಾ ಮೊತ್ತ ರೂ. 22258, ಪ್ರೀಮಿಯಂ ಮೊತ್ತ ರೂ.6495, ರೈತರ ಪಾಲು ರೂ.445, ಕೇಂದ್ರ ಸರ್ಕಾರದ ಪಾಲು ರೂ.3025 ಮತ್ತು ರಾಜ್ಯ ಸರ್ಕಾರದ ಪಾಲು ರೂ.3025 ಆಗಿದೆ.
ಹಾಗೆಯೇ ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ. 20235, ಪ್ರೀಮಿಯಂ ಮೊತ್ತ ರೂ.6003.72, ರೈತರ ಪಾಲು ರೂ.405, ಕೇಂದ್ರ ಸರ್ಕಾರದ ಪಾಲು ರೂ.2800 ಹಾಗೂ ರಾಜ್ಯ ಸರ್ಕಾರದ ಪಾಲು ರೂ.2,800 ರೂ. ಆಗಿದೆ.
ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪದಿಂದ ಬೆಳೆ ನಷ್ಟ ಉಂಟಾದಲ್ಲಿ ರೈತರಿಗೆ ನೆರವು ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ತಿಳಿಸಿದರು.
ಬೆಳೆ ವಿಮೆ ಜಿಲ್ಲಾ ಸಂಯೋಜಕರಾದ ಬೊಳ್ಳಜ್ಜಿರ ಅಯ್ಯಪ್ಪ, ಚಂದ್ರಶೇಖರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ, ತಹಶೀಲ್ದಾರ್ ಮಹೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಪ್ರಮೋದ್, ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ರವಿಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಗೌರಿ, ಕೃಷಿ ಅಧಿಕಾರಿ ನಾರಾಯಣ ರೆಡ್ಡಿ, ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ತಜ್ಞರಾದ ಹರೀಶ್, ಇತರರು ಇದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network