Header Ads Widget

Responsive Advertisement

ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಭೇಟಿ

ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಭೇಟಿ 


ಮಡಿಕೇರಿ ಡಿ.30: ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2015 ರಿಂದ 2020 ರವರೆಗಿನ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಕೊರೆಸಲಾದ ಕೊಳವೆ ಬಾವಿ ಸಂಬಂಧಿಸಿದಂತೆ ಪರಿಶೀಲಿಸಲು ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿಯು ಜನವರಿ, 04 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಅಭಿವೃದ್ದಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ಸಂಬಂಧ ಮಾಹಿತಿ ನೀಡುವಂತೆ ಸೂಚಿಸಿದರು.    

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೆಯೇ ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಶಿಷ್ಟಾಚಾರ ಪಾಲಿಸುವಂತೆ ನಿರ್ದೇಶನ ನೀಡಿದರು.   

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಚಂದ್ರಶೇಖರ್ ಅವರು ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಪ್ರವಾಸ ಕಾರ್ಯಕ್ರಮ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.  

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಧಿಕಾರಿ ಕೆ.ಶ್ರೀನಿವಾಸ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಪಂಚಾಯತ್ ರಾಜ್ ಇಲಾಖೆಯ ಇಇ ಮಂಜುನಾಥ್, ಸಣ್ಣ ನೀರಾವರಿ ಇಲಾಖೆಯ ಎಇಇ ಕಾಂತರಾಜು, ಸೆಸ್ಕ್ ಎಇಇ ವಿನಯ ಕುಮಾರ್, ಭೂವಿಜ್ಞಾನಿ ಸೌಮ್ಯ ಅವರು ಹಲವು ಮಾಹಿತಿ ನೀಡಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,