Ad Code

Responsive Advertisement

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ


ಮಡಿಕೇರಿ ಡಿ.14: ಪ್ರಸಕ್ತ (2021-22) ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಮತ್ತು ಅಲೆಮಾರಿ/ ಅರೆ ಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಒಂದನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

     ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು; ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿ ವೇತನ ವಾರ್ಷಿಕ ಆದಾಯ ಮಿತಿ  ರೂ.2.50 ಲಕ್ಷ , ಪ್ರವರ್ಗ -1 ರ ವಿದ್ಯಾರ್ಥಿಗಳಿಗೆ ಮಾತ್ರ ರೂ 1 ಲಕ್ಷ, ಪ್ರವರ್ಗ -2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳಿಗೆ ರೂ.44,500 ಆಗಿದೆ.

     ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್ –ಐಡಿ, ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ್ ಸಂಖ್ಯೆ, ಜಾತಿ ಪ್ರಮಾಣದ ಪತ್ರದ ಆರ್.ಡಿ.ಸಂಖ್ಯೆ, ಆದಾಯ ಪ್ರಮಾಣದ ಪತ್ರದ ಆರ್.ಡಿ.ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ, ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಐಎಫ್‍ಎಸ್‍ಸಿ ಸಂಖ್ಯೆ ಬ್ಯಾಂಕಿನ ವಿಳಾಸ, ಪೋಷಕರ ಆಧಾರ್ ನಂಬರ್‍ಗೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಹಾಗೂ ಭೌತಿಕ ಅನುಮತಿ ಪತ್ರ ಸಲ್ಲಿಸಬೇಕು. 

     ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್‍ಸೈಟ್ www.ssp.karnataka.gov.in/8080/2122  ಸಂಪರ್ಕಿಸಬಹುದು.

       ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ಮೊ.ಸಂ.9448205919, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂ.9480356409 ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂ.8762476790, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂ. 8660019042 ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,